newsics.com
ಬೆಂಗಳೂರು: ಕರ್ನಾಟಕದಲ್ಲಿ ಅನರ್ಹ ರೇಷನ್ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮಕೈಗೊಂಡಿದೆ. ಹೌದು, ಸರ್ಕಾರದ ದಾಖಲೆ ಪ್ರಕಾರ ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್‌ಗಳಿವೆ ಎನ್ನುವ ಮಾಹಿತಿ ಸಿಕ್ಕಿದೆ.
ಆಗಸ್ಟ್ ತಿಂಗಳಿನಲ್ಲೇ ಶಾಕಿಂಗ್ ಅಂಕಿಅಂಶ ಬಿಚ್ಚಿಟ್ಟಿರುವ ಇ ಗವರ್ನೆನ್ಸ್ ಇಲಾಖೆ ಇದೀಗ ಆಹಾರ ಇಲಾಖೆಗೆ ಮಾಹಿತಿ ರವಾನೆ ಮಾಡಿದೆ. ಈ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟು 22,62,482 ಅನರ್ಹ ಪಡಿತರ ಚೀಟಿದಾರರಿದ್ದಾರೆ.
ಇ ಗವರ್ನೆನ್ಸ್ ಇಲಾಖೆ ನೀಡಿದ ಮಾಹಿತಿ ಇಟ್ಟುಕೊಂಡೇ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಅದರಲ್ಲೂ ಕಲಬುರಗಿ ಜಿಲ್ಲೆಯಲ್ಲೇ ಅತಿಗಹೆಚ್ಚು ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಟ್ಟಿರುವ ಮಾಹಿತಿ ಸಿಕ್ಕಿದೆ.
ಕಲಬುರಗಿಯಲ್ಲಿ 78,058 ಮಂದಿ ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 65,563 ಅನರ್ಹರ ಬಳಿ ಬಿಪಿಎಲ್ ಕಾರ್ಡ್ ಇದೆ. ಬೆಂಗಳೂರು ಪೂರ್ವದಲ್ಲಿ 9,129 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ಉತ್ತರದಲ್ಲಿ 17,382 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಬೆಂಗಳೂರು ದಕ್ಷಿಣದಲ್ಲಿ 11,447 ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲಾಗಿದೆ. ಈ ಮಧ್ಯೆ ಬಾಗಲಕೋಟೆಯಲ್ಲಿ ಬಿಪಿಎಲ್ ಕಾರ್ಡ್ ರದ್ದಿನಿಂದಾಗಿ ಪಡಿತರ ಸಿಗದೇ ವೃದ್ಧೆಯೊಬ್ಬರು ಕಣ್ಣೀರು ಹಾಕಿದ್ದಾರೆ.
ಇನ್ನು ಜಿಲ್ಲಾವಾರು ಎಷ್ಟೆಷ್ಟು ಅನರ್ಹ ಕಾರ್ಡ್‌ಗಳಿವೆ ಎಂಬುದನ್ನ ಪತ್ತೆ ಮಾಡಿರುವ ಇ ಗವರ್ನೆನ್ಸ್ ಇಲಾಖೆ, ಜಿಲ್ಲಾವಾರು ಅನರ್ಹ ಬಿಪಿಎಲ್ ಕಾರ್ಡ್‌ಗಳ ಮಾಹಿತಿಯನ್ನೂ ಇ ಗವರ್ನೆನ್ಸ್ ಮಾಹಿತಿ ನೀಡಿದೆ. ಆಹಾರ ಇಲಾಖೆ ಆಯುಕ್ತರು ಇ ಗವರ್ನೆನ್ಸ್ ಮಾಹಿತಿ ಪಡೆದು ಎಲ್ಲಾ ಜಿಲ್ಲೆಯ ಜಂಟಿ ನಿರ್ದೇಶಕರು, ಉಪ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ.