newsics.com
ಗುಜರಾತ್: ಶಿವ ದೇಗುಲದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಿದ್ದ ವ್ಯಕ್ತಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
ಘಟನೆಯ ಸಂಪೂರ್ಣ ದೃಶ್ಯ ದೇವಸ್ಥಾನದಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದೆ.
ಕುಸಿದು ಬೀಳುತ್ತಿದ್ದಂತೆ ದೇವಸ್ಥಾನದಲ್ಲಿದ್ದ ಇತರ ಭಕ್ತರು ಗಾಬರಿಯಾಗಿದ್ದಾರೆ. ಅದರಲ್ಲಿ ಒಬ್ಬ ವ್ಯಕ್ತಿ ಸಿಪಿಆರ್ ಮಾಡಲು ಮುಂದಾಗಿದ್ದಾರೆ. ಆದರೆ ಅವರ ಪ್ರಯತ್ನ ವ್ಯರ್ಥವಾಗಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಆದರೆ ಗುಜರಾತ್ನ ಯಾವ ಊರಿನ ದೇವಸ್ಥಾನದಲ್ಲಿ ಈ ಘಟನೆ ನಡೆಯಿತು ಎಂಬ ವಿವರ ಲಭ್ಯವಾಗಿಲ್ಲ.
Dowry harassment ವರದಕ್ಷಿಣೆ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಮಹಿಳೆ ಆತ್ಮ*ಹತ್ಯೆ
Banglore murder ಮಚ್ಚಿನಿಂದ ಕೊಚ್ಚಿ ತುಪ್ಪದ ವ್ಯಾಪಾರಿಯ ಬರ್ಬರ ಕೊಲೆ
Terrorist firing ಪ್ರಯಾಣಿಕ ವಾಹನಗಳ ಮೇಲೆ ಉಗ್ರರ ಗುಂಡಿನ ದಾಳಿ: ಮಕ್ಕಳು ಸೇರಿ ಕನಿಷ್ಟ 38 ಜನ ಸಾವು