newsics.com
ಬೆಂಗಳೂರು: ರಾಜ್ಯದಲ್ಲಿ ಮೂರೂ ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಶನಿವಾರ ನಡೆಯುತ್ತಿದ್ದು, ಇದೀಗ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್‌ಗೆ ಹಿನ್ನಡೆಯಾಗಿದೆ. ಸಂಡೂರಿನಲ್ಲಿ ಮಾತ್ರ 17ನೇ ಸುತ್ತಿನಲ್ಲಿ ಬಿಜೆಪಿ ಅಲ್ಪ ಮುನ್ನಡೆ ಸಾಧಿಸಿತ್ತಾದರೂ ಈಗ ಕಾಂಗ್ರೆಸ್ ಮುಂದಿದೆ.
ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬೇರೆ ಕ್ಷೇತ್ರಗಳಿಗಿಂತ ಹೆಚ್ಚು ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ 15 ಸಾವಿರಕ್ಕೂ ಅಧಿಕ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮತ ಕೇಂದ್ರದ ಬಳಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ ಶುರುವಾಗಿದೆ.
ಸಿಪಿ ಯೋಗೇಶ್ವರ್ 15,000 ಮತಗಳ ಮುನ್ನಡೆ ಸಾಧಿಸಿದ್ದು, ಸಂಡೂರಿನಲ್ಲಿ ಅನುಪೂರ್ಣ ತುಕಾರಾಮ ಅವರು ಕೇವಲ 108 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಅದೇ ರೀತಿ ಶಿಗ್ಗಾವಿಯಲ್ಲಿ ಯಾಸೀರ್ ಪಠಾಣ್ ಖಾನ್ ಅವರು ರತ್ನಮಾ ವಿರುದ್ಧ 1158 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಆರಂಭಿಕ ಸತ್ತುಗಳ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರು. ಆದರೆ ಇದೀಗ ಚನ್ನಪಟ್ಟಣ ಶಿಗ್ಗಾವಿ ಹಾಗೂ ಸಂಡೂರಿನಲ್ಲಿ ಕಾಂಗ್ರೆಸ್ಸಿನ ಮೂರು ಅಭ್ಯರ್ಥಿಗಳು ಭಾರಿ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.
Strike warning ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸಾರಿಗೆ ನೌಕರರು ಎಚ್ಚರಿಕೆ
ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಟಾಲಿವುಡ್ ಹೀರೋಯಿನ್ Andrea jeremiah