newsics.com
ಮಡಿಕೇರಿ: ದೇಶ ಕಂಡ ಮಹಾನ್ ಸೇನಾಧಿಕಾರಿಗಳ ವಿರುದ್ಧ ಪೋಸ್ಟ್ ಹಾಕಿದ ಆರೋಪದಡಿ ಮಡಿಕೇರಿಯ ವಕೀಲರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಮಡಿಕೇರಿಯ ವಕೀಲ ಕೆ.ಆರ್.ವಿದ್ಯಾಧರ್ ಅವರನ್ನು ಸುಂಟಿಕೊಪ್ಪ ಪೊಲೀಸರು ತಡರಾತ್ರಿ ಬಂಧಿಸಿ ಮಡಿಕೇರಿಯ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು, ಸರ್ಕಾರಿ ಅಭಿಯೋಜಕರಿಂದ ಆಕ್ಷೇಪ ಪತ್ರ ಪಡೆದು ಆರೋಪಿಗೆ ಷರತ್ತುಬದ್ಧ ಜಾಮೀನನ್ನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ರಾತ್ರಿಯೇ ಅವರು ಬಿಡುಗಡೆಗೊಂಡಿದ್ದಾರೆ.
ವೀರ ಸೇನಾನಿಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯರನ್ನು ಅವಹೇಳನಕಾರಿಯಾಗಿ ಬಿಂಬಿಸಿ ಶ್ರೀವತ್ಸ ಭಟ್ ಹೆಸರಿನಲ್ಲಿ ನಕಲಿ ಖಾತೆ ತೆರೆದು ಶುಕ್ರವಾರ ಪೋಸ್ಟ್ ಮಾಡಲಾಗಿತ್ತು.
ಇದರ ವಿರುದ್ಧ ಜಿಲ್ಲೆಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಜನಪ್ರತಿನಿಧಿಗಳು, ಸಂಘಸಂಸ್ಥೆಗಳು ಹಾಗೂ ಜಿಲ್ಲಾ ಬಿಜೆಪಿ ಪ್ರಮುಖರು ಪೊಲೀಸ್ ವರಿಷ್ಠಾಧಿಕಾರಿಯವರನ್ನು ಒತ್ತಾಯಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಪತ್ತೆಗಾಗಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದ್ದರು. ಈ ತಂಡ ತನಿಖೆ ನಡೆಸಿ ಶುಕ್ರವಾರ ತಡರಾತ್ರಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ.
Copper Age Group Institute ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ
Bigg Boss Kannada ನಂಗೂ ಹೊಟ್ಟೆ ಉರಿಯಲ್ವಾ?: ರಜತ್ ಹೀಗ್ಯಾಕೆ ಹೇಳಿದ್ರು..?