Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Maharashtra Jarkhand Result ಮಹಾರಾಷ್ಟ್ರದಲ್ಲಿ ಎನ್‌ಡಿಎ ಭಾರೀ‌ ಮುನ್ನಡೆ, ಜಾರ್ಖಂಡ್‌ನಲ್ಲಿ ಕೈ ಮೈತ್ರಿಕೂಟಕ್ಕೆ ಅಧಿಕಾರ ಸಾಧ್ಯತೆ
ದೇಶಪ್ರಮುಖ

Maharashtra Jarkhand Result ಮಹಾರಾಷ್ಟ್ರದಲ್ಲಿ ಎನ್‌ಡಿಎ ಭಾರೀ‌ ಮುನ್ನಡೆ, ಜಾರ್ಖಂಡ್‌ನಲ್ಲಿ ಕೈ ಮೈತ್ರಿಕೂಟಕ್ಕೆ ಅಧಿಕಾರ ಸಾಧ್ಯತೆ

Share
1 Min Read
SHARE

newsics.com

ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಮಹಾರಾಷ್ಟ್ರದಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಲೋಕಸಭಾ ಚುನಾವಣೆಯಲ್ಲಿ ಇದೇ ರಾಜ್ಯದಲ್ಲಿ ಎದುರಿಸಿದ್ದ ಹೀನಾಯ ಪ್ರದರ್ಶನವನ್ನು ಎನ್‌ಡಿಎ ಹಿಮ್ಮೆಟ್ಟಿಸಿದೆ.

ಆದರೆ, ಜಾರ್ಖಂಡ್‌ನಲ್ಲಿ ಆಡಳಿತಾರೂಢ ಜೆಎಂಎಂ ಹಾಗೂ ಕಾಂಗ್ರೆಸ್‌ ಮೈತ್ರಿಕೂಟವನ್ನು ಅಲುಗಾಡಿಸಲು ಎನ್‌ಡಿಎಗೆ ಸಾಧ್ಯವಾಗಿಲ್ಲ. ಜಾರ್ಖಂಡ್‌ ರಾಜ್ಯದಲ್ಲಿ ಎನ್‌ಡಿಎ ಹಿನ್ನಡೆ ಕಂಡಿದೆ.

ಮಹಾರಾಷ್ಟ್ರದಲ್ಲಿ, ಬಿಜೆಪಿ, ಅಜಿತ್ ಪವಾರ್ ಅವರ ಎನ್‌ಸಿಪಿ ಬಣ ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ ಒಳಗೊಂಡಿರುವ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಇಲ್ಲಿಯವರೆಗೂ 216 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. 288 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) 60 ಸ್ಥಾನಗಳಲ್ಲಿ ಮುಂದಿದೆ. ಇಲ್ಲಿ ಬಹುಮತ ಸಾಧಿಸಲು 145 ಇಲ್ಲಿ ಮ್ಯಾಜಿಕ್‌ ನಂಬರ್ ಆಗಿದೆ.

ಜಾರ್ಖಂಡ್‌ನಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಹೇಮಂತ್ ಸೊರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನೇತೃತ್ವದ ಆಡಳಿತಾರೂಢ ಒಕ್ಕೂಟವು 81 ಸದಸ್ಯ ಬಲದ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ಬೇಕಾದ 42 ಮ್ಯಾಜಿಕ್‌ ನಂಬರ್‌ ದಾಟಿ 49 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಎನ್‌ಡಿಎ 30 ರಲ್ಲಿ ಮುನ್ನಡೆ ಸಾಧಿಸಿದೆ.

ಕಾಂಗ್ರೆಸ್ ಸೇರಿದಂತೆ ಇಂಡಿಯಾ ಒಕ್ಕೂಟ ಜಾರ್ಖಂಡ್ ಉಳಿಸಿಕೊಳ್ಳಲು ಮತ್ತು ಮಹಾರಾಷ್ಟ್ರದಲ್ಲಿ ಮಹಾಯುತಿಯನ್ನು ಸೋಲಿಸುವ ನಿರೀಕ್ಷೆಯಲ್ಲಿತ್ತು. ಈ ನಡುವೆ, ಹರಿಯಾಣದ ವಿಧಾನಸಭಾ ಚುನಾವಣೆಯಲ್ಲಿ ತನ್ನ ಸಾಧನೆಯಿಂದ ಉತ್ತೇಜಿತವಾಗಿರುವ ಬಿಜೆಪಿ, ಎರಡೂ ರಾಜ್ಯಗಳಲ್ಲಿ ನಿರ್ಣಾಯಕ ಗೆಲುವಿನ ಮೇಲೆ ಕಣ್ಣಿಟ್ಟಿದೆ.

ಇದರೊಂದಿಗೆ 13 ರಾಜ್ಯಗಳಾದ್ಯಂತ 48 ವಿಧಾನಸಭಾ ಉಪಚುನಾವಣೆಗಳು ಮತ್ತು ಎರಡು ಪ್ರಮುಖ ಸಂಸದೀಯ ಕ್ಷೇತ್ರಗಳಾದ ಮಹಾರಾಷ್ಟ್ರದ ನಾಂದೇಡ್‌ ಹಾಗೂ ಕೇರಳದ ವಯನಾಡ್‌ ಕ್ಷೇತ್ರದ ಫಲಿತಾಂಶಗಳನ್ನು ನಿರೀಕ್ಷಿಸಲಾಗಿದೆ. ವಯನಾಡ್ ಕಾಂಗ್ರೆಸ್‌ಗೆ ಪ್ರತಿಷ್ಠೆಯ ಯುದ್ಧವಾಗಿದೆ, ಈ ಹಿಂದೆ ಲೋಕಸಭೆಯಲ್ಲಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಅವರ ಸಹೋದರ ರಾಹುಲ್ ಗಾಂಧಿ ಅವರು ಸ್ಥಾನವನ್ನು ತೆರವು ಮಾಡಿದ ನಂತರ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು ಸುಲಭ ಗೆಲುವಿನ ಹಾದಿಯಲ್ಲಿದ್ದಾರೆ.

Advocate Arrest ವೀರ ಸೇನಾನಿಗಳ ಅವಹೇಳನ ಆರೋಪ: ವಕೀಲ ವಿದ್ಯಾಧರ್ ಬಂಧನ

Copper Age Group Institute ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್ ಮಾಲೀಕ ಆತ್ಮಹತ್ಯೆ

Bigg Boss Kannada ನಂಗೂ ಹೊಟ್ಟೆ ಉರಿಯಲ್ವಾ?: ರಜತ್ ಹೀಗ್ಯಾಕೆ ಹೇಳಿದ್ರು..?

TAGGED:Congress alliance likely to win power in JharkhandNDA's huge lead in Maharashtra
Share This Article
Facebook Twitter Copy Link Print
Previous Article Election Result ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣಾ ತುಕಾರಾಂ ಗೆಲುವು
Next Article Election Result ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ .ಪಿ ಯೋಗೇಶ್ವರ್‌ ಭರ್ಜರಿ ಗೆಲುವು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?