newsics.com
ಮುಂಬೈ: ಮಹಾರಾಷ್ಟ್ರ ಮತ್ತು ಜಾರ್ಖಂಡ್ನ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಇಂದು ಪ್ರಕಟಗೊಂಡಿದೆ. ಮಹಾರಾಷ್ಟ್ರದ 288 ಮತ್ತು ಜಾರ್ಖಂಡ್ನ 81 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೆಳಗ್ಗೆ 8 ಗಂಟೆಗೆ ನಡೆಯಿತು.
ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶಗಳು ರಾಜ್ಯದ ರಾಜಕೀಯದ ಮೇಲೆ ಮಾತ್ರವಲ್ಲದೆ ರಾಷ್ಟ್ರ ರಾಜಕಾರಣದ ಮೇಲೂ ಪರಿಣಾಮ ಬೀರಲಿದೆ. ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಮಹಾಯುತಿ ಮ್ಯಾಜಿಕ್ ನಂಬರ್ಗಿಂತಲೂ ಹೆಚ್ಚಿನ ಸ್ಥಾನಗಳಿಸಿದೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಹೀನಾಯ ಸೋಲುಂಡಿದೆ.
ಮಹಾರಾಷ್ಟ್ರದಲ್ಲಿ ಎನ್ಡಿಎ ನೇತೃತ್ವದ ಮೈತ್ರಿಕೂಟ ಮಹಾಯುತಿಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಎಲ್ಲಾ 288 ವಿಧಾನಸಭಾ ಸ್ಥಾನಗಳಲ್ಲಿ ಗೆಲುವಿಗೆ ಬೇಕಾದ ಮ್ಯಾಜಿಕ್ ನಂಬರ್ ಅನ್ನು ಬಿಜೆಪಿ ಮೈತ್ರಿ ಪಕ್ಷಗಳು ದಾಟಿವೆ.
ಇನ್ನು ಮತ ಎಣಿಕೆ ನಡೆಯುತ್ತಿದ್ದು, ಸಂಜೆ ರಾಜ್ಯ ಚುನಾವಣೆ ಆಯೋಗ ಅಧಿಕೃತ ಮಾಹಿತಿ ನೀಡಲಿದೆ. ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟ ಮತ್ತು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ನಡುವೆ ಚುನಾವಣಾ ಕದನ ತಾರ್ಕಿಕ ಅಂತ್ಯ ಕಂಡಿದ್ದು, ಜನರಿಗಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ.
ಎನ್ಡಿಎ ನೇತೃತ್ವದಲ್ಲಿ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಒಪ್ಪಂದ ನಡೆಯಿತು. ಮಹಾಯುತಿ ಮೈತ್ರಿಕೂಟದಿಂದ ಸ್ಪರ್ಧಿಸಿದ ಪಕ್ಷಗಳಲ್ಲಿ ಬಿಜೆಪಿಗೆ ಅಗ್ರಸ್ಥಾನ ಸಿಕ್ಕಿದೆ. ಅಂದರೆ 148 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿದರು. ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು 80 ಸ್ಥಾಣಗಳಲ್ಲಿ ಸ್ಪರ್ಧೆಗೆ ಇಳಿಯಿತು. ಅಜಿತ್ ಪವಾರ್ ಅವರ ಎನ್ಸಿಪಿ ಯು 53 ಸ್ಥಾನಗಳಲ್ಲಿ ಸ್ಪರ್ಧಿಸಿ ಗೆದ್ದಿದೆ.
ಇನ್ನು ಕಾಂಗ್ರೆಸ್ ನೇತೃತ್ವದ ಮಹಾವಿಕಾಸ್ ಅಘಾಡಿ ಮೈತ್ರಿಕೂಟದಲ್ಲಿ ಕಾಂಗ್ರೆಸ್ 103ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಪಕ್ಷ ಬರೋಬ್ಬರಿ 89 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತು. ಇನ್ನೂ ಶರದ್ ಪವಾರ್ ನೇತೃತ್ವದ NCP (SP) 87 ಸ್ಥಾನಗಳಲ್ಲಿ ಅಭ್ಯರ್ಥಿಗಳ ಸ್ಪರ್ಧೆಗೆ ಅವಕಾಶ ನೀಡಿತು.