newsics.com
ಶಿವಮೊಗ್ಗ: ತಂದೆ ಮತ್ತು ಮಗನ ನಡುವೆ ಜಗಳ ನಡೆದಿದ್ದು, ಕುಡುಗೋಲಿನಿಂದ ಹೆತ್ತ ಮಗನನ್ನೇ ತಂದೆ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಬಳ್ಳೂರು ಗ್ರಾಮದಲ್ಲಿ ನಡೆದಿದೆ.
ಗಂಗಾನಾಯ್ಕ್(36) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ತಂದೆ ಲಿಂಗಾನಾಯ್ಕ್ ಜೊತೆಗೆ ಆಸ್ತಿ ವಿಚಾರಕ್ಕೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಲಿಂಗಾನಾಯ್ಕ್ ಕುಡಗೋಲಿನಿಂದ ಮಗನ ಎದೆ ಭಾಗಕ್ಕೆ ಚುಚ್ಚಿದ್ದು, ತೀವ್ರ ರಕ್ತಸ್ರಾವದಿಂದ ಗಂಗಾನಾಯ್ಕ್ ಮೃತಪಟ್ಟಿದ್ದಾನೆ.
ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿಡಿವೈಎಸ್ಪಿ ಕೇಶವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.