newsics.com
ಬರೇಲಿ (ಉತ್ತರ ಪ್ರದೇಶ): ರಾತ್ರಿ ವೇಳೆ ಕಾರೊಂದು ನಿರ್ಮಾಣ ಹಂತದ ಸೇತುವೆಯಿಂದ ರಾಮಗಂಗಾ ನದಿಯ ಮರಳಿಗೆ ಬಿದ್ದು, ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಫರೀದ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಫರೂಕಾಬಾದ್‌ನ ಮೂವರು ಯುವಕರು ಬದೌನ್‌ನ ದತಗಂಜ್‌ನಿಂದ ಫರೀದ್‌ಪುರ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಬರೇಲಿಯ ಫರೀದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಲ್‌ಪುರದ ರಾಮಗಂಗಾ ನದಿಯ ನಿರ್ಮಾಣ ಹಂತದ ಸೇತುವೆಯಿಂದ ರಾಮಗಂಗಾ ನದಿಗೆ ಬಿದ್ದಿದೆ. ಕಾರು ಬಹಳ ಎತ್ತರದಿಂದ ಬಿದ್ದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತರನ್ನು ಅಮಿತ್ ಕುಮಾರ್ ಮತ್ತು ಆತನ ಸಹೋದರ ವಿವೇಕ್ ಕುಮಾರ್ ಮತ್ತು ಸ್ನೇಹಿತ ಕೌಶಲ್ ಎಂದು ಗುರುತಿಸಲಾಗಿದೆ.
ಗೂಗಲ್ ಮ್ಯಾಪ್ನಲ್ಲಿ ಮಾರ್ಗ ನೋಡಿಕೊಂಡು ಮೂವರು ಸ್ನೇಹಿತರು ಗುರ್ಗಾಂವ್ನಿಂದ ಬರುತ್ತಿದ್ದರು ಎಂದು ಮೃತರ ಕುಟುಂಬಸ್ಥರು ತಿಳಿಸಿದ್ದಾರೆ.
ಗೂಗಲ್ ನಕ್ಷೆಯಲ್ಲಿ, ನಿರ್ಮಾಣ ಹಂತದಲ್ಲಿರುವ ಸೇತುವೆಯ ಮಾರ್ಗವನ್ನು ಸ್ಪಷ್ಟವಾಗಿ ತೋರಿಸಲಾಗಿದೆ. ಆದರೆ, ಸೇತುವೆಯ ಒಂದು ಬದಿಯಲ್ಲಿ ಮಾರ್ಗವನ್ನು ನಿರ್ಮಿಸಲಾಗಿಲ್ಲ. ಹೀಗಾಗಿ ಅಲ್ಲಿಂದ ಕಾರು ಸುಮಾರು 50 ಅಡಿ ಕೆಳಗೆ ಬಿದ್ದಿರುವುದರಿಂದ ಮೂವರೂ ಮೃತಪಟ್ಟಿದ್ದಾರೆ.
ಭಾನುವಾರ ಬೆಳಗ್ಗೆ ರಾಮಗಂಗಾ ನದಿ ದಡದಲ್ಲಿ ಬಿದ್ದಿರುವ ಕಾರನ್ನು ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಮೃತರ ಕುಟುಂಬಸ್ಥರಿಗೆ ಅಪಘಾತವಾದ ವಿಷಯ ತಿಳಿದಿದೆ.
Relationship Tips ಈ ವಿಷಯಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು, ಮುಜುಗರಪಟ್ಟುಕೊಂಡರೆ ಅಪಾಯ ನಿಶ್ಚಿತ
IPL Auction ಐಪಿಎಲ್ ಹರಾಜು: ಯಾರು ಎಷ್ಟು ದುಡ್ಡಿಗೆ ಖರೀದಿಯಾದ್ರು? ಯಾರ‌್ಯಾರು ಸೇಲ್ ಆಗ್ಲಿಲ್ಲ? ಇಲ್ಲಿದೆ ಪಟ್ಟಿ
ತೆಲುಗು Bigg Bossನಿಂದ ಕನ್ನಡತಿ ಯಶ್ಮಿ ಗೌಡ ಪಡೆದ ಸಂಭಾವನೆ ಬರೋಬ್ಬರಿ 24 ಲಕ್ಷ ರೂ!