Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Seasonal Health Tips ಚಳಿಗಾಲದಲ್ಲಿ ಹೆಚ್ಚಿದ ಹೃದಯಾಘಾತ, ಪಾರ್ಶ್ವವಾಯು ಪ್ರಕರಣ: ಇದರಿಂದ ಪಾರಾಗಲು ಹೀಗೆ ಮಾಡಿ
ಆರೋಗ್ಯಪ್ರಮುಖಲೈಫ್‌ಸ್ಟೈಲ್

Seasonal Health Tips ಚಳಿಗಾಲದಲ್ಲಿ ಹೆಚ್ಚಿದ ಹೃದಯಾಘಾತ, ಪಾರ್ಶ್ವವಾಯು ಪ್ರಕರಣ: ಇದರಿಂದ ಪಾರಾಗಲು ಹೀಗೆ ಮಾಡಿ

Share
2 Min Read
SHARE

newsics.com
ಚಳಿಗಾಲ ಆರಂಭವಾಗಿಬಿಟ್ಟಿದೆ. ಈ ಸಮಯದಲ್ಲಿ ಹೃದಯಾಘಾತ ಮತ್ತು ಪಾರ್ಶ್ವವಾಯು ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ತಜ್ಞರು ಕೆಲವು ಸಲಹೆಗಳನ್ನು ನೀಡಿದ್ದಾರೆ. ಪಾರ್ಶ್ವವಾಯು ಹಾಗೂ ಹೃದಯಾಘಾತದಿಂದ ದೂರವಿರಲು ಬೆಚ್ಚಗಿರಿ, ಕ್ರಿಯಾಶೀಲರಾಗಿರಿ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಿ.

ಈ ಮೊದಲು ಸಾಮಾನ್ಯವಾಗಿ 50 ವರ್ಷದ ನಂತರದಲ್ಲಿ ಹೃದಯಾಘಾತ ಪ್ರಕರಣಗಳು ಕಂಡು ಬರುತ್ತಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ಎಲ್ಲಾ ವಯಸ್ಸಿನವರಲ್ಲಿಯೂ ಈ ಹೃದಯಾಘಾತ ಪ್ರಕರಣಗಳು ಕಂಡು ಬರುತ್ತಿವೆ.

ಅದರಲ್ಲಿಯೂ ಈ ಚಳಿಗಾಲದಲ್ಲಿ ಹೃದ್ರೋಗ ಸಮಸ್ಯೆಗಳು ವೇಗವಾಗಿ ಹೆಚ್ಚಾಗುತ್ತಿದ್ದು ನಮ್ಮ ಜೀವನಶೈಲಿಯಲ್ಲಿ ಹಲವಾರು ರೀತಿಯ ಸುಧಾರಣೆ ಮಾಡಿಕೊಳ್ಳಬೇಕಾಗಿದೆ.

ಕೆಟ್ಟ ಆಹಾರ ಪದ್ಧತಿ, ವ್ಯಾಯಾಮದ ಕೊರತೆ ಮತ್ತು ಜಂಕ್ ಫುಡ್ ಸೇವನೆಯು ನಿಮ್ಮನ್ನು ನಾನಾ ರೀತಿಯ ರೋಗಗಳಿಗೆ ಆಹ್ವಾನ ನೀಡುತ್ತದೆ. ಬಳಿಕ ಇವು ಹೃದಯ ಸಂಬಂಧಿತ ಸಮಸ್ಯೆಗೆ ಕಾರಣವಾಗುತ್ತವೆ. ಅಂದರೆ, ನಿಮ್ಮ ಜೀವನಶೈಲಿ ಹೃದಯಾಘಾತಕ್ಕೆ ಕಾರಣವಾಗುತ್ತದೆ. ಹೀಗಾಗಿ ನೀವು ನಮ್ಮ ಜೀವನಶೈಲಿ ಬದಲಾವಣೆಯೊಂದಿಗೆ ಚಳಿಗಾಲದಲ್ಲಿ ಹೆಚ್ಚು ಜಾಗ್ರತೆ ವಹಿಸಬೇಕಾಗಿದೆ.

ಮೊದಲನೆಯದಾಗಿ, ನೀವು ಪ್ರತಿನಿತ್ಯ ವಾಕಿಂಗ್ ಮಾಡುವುದನ್ನು ಅಭ್ಯಾಸ ಮಾಡಿಕೊಳ್ಳಿ. ನೀವು ಹೆಚ್ಚು ಕಷ್ಟಕರವಾದ ವ್ಯಾಯಾಮಗಳನ್ನು ಮಾಡುವುದು ಮುಖ್ಯವಲ್ಲ. ಆದರೆ ನೀವು ದಿನಕ್ಕೆ ಕನಿಷ್ಠ 8 ರಿಂದ 9 ಸಾವಿರ ಹೆಜ್ಜೆಗಳನ್ನು ನಡೆಯದಿದ್ದರೆ, ಅದು ನಿಮ್ಮ ಹೃದಯದ ಆರೋಗ್ಯಕ್ಕೆ ಹಾನಿ ಮಾಡುತ್ತದೆ ಎಂಬುದನ್ನು ಮರೆಯಬೇಡಿ. ಪ್ರತಿದಿನ ವ್ಯಾಯಾಮ ಮತ್ತು ವಾಕಿಂಗ್ ಮಾಡುವುದರಿಂದ ತೂಕ ಕಡಿಮೆ ಆಗುತ್ತದೆ. ಜತೆಗೆ ಈ ಅಭ್ಯಾಸ ಹೃದ್ರೋಗ, ಪಾರ್ಶ್ವವಾಯು, ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಿಸುತ್ತದೆ.

ಬೊಜ್ಜು ಇದು ನೂರಾರು ರೋಗಗಳಿಗೆ ಕಾರಣವಾಗುತ್ತದೆ. ಬೊಜ್ಜು ಮಧುಮೇಹ, ಅಧಿಕ ರಕ್ತದೊತ್ತಡದಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ, ಈ ಸಮಯದಲ್ಲಿ ನಿಮ್ಮ ತೂಕವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ವಿಶೇಷವಾಗಿ, ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿಯೂ ಅನಗತ್ಯ ತೂಕ ಹೆಚ್ಚಳವಾಗುತ್ತಿದೆ. ಇದು ಮುಂದೆ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ನಿಮ್ಮ ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ಇರಲಿ.

ನೀವು ಹೊರಗಿನ ಆಹಾರವನ್ನು ಹೆಚ್ಚು ಸೇವಿಸಿದರೆ, ನಿಮ್ಮ ಹೃದಯದ ಆರೋಗ್ಯ ಅಷ್ಟೇ ವೇಗವಾಗಿ ಹಾಳಾಗುತ್ತದೆ. ಕರಿದ ಆಹಾರಗಳು, ಸಾಸೇಜ್‌ಗಳು, ಬೆಣ್ಣೆ ಮತ್ತು ಕೇಕ್‌ಗಳಂತಹ ಕೊಬ್ಬಿನಿಂದ ತಯಾರಾದ ಆಹಾರಗಳು ಎಲ್ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ವೇಗವಾಗಿ ಹೆಚ್ಚಿಸುತ್ತವೆ. ಇದು ಹೃದಯದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.

ನಿರಂತರವಾಗಿ ಕೆಲಸದಲ್ಲಿ ನಿರತರಾಗಬೇಡಿ. ಕೆಲಸದ ಮಧ್ಯೆ ಮಧ್ಯೆ ವಿರಾಮ ತೆಗೆದುಕೊಳ್ಳಿ. ರಜೆ ತೆಗೆದುಕೊಳ್ಳಿ, ಹೊರಗೆ ಹೋಗಿ ಮತ್ತು ನಿಮಗೆ ಇಷ್ಟವಾದದ್ದನ್ನು ಮಾಡಿ. ಹೀಗೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ.

Beauty Tips | ಬಿಯರ್‌ನಿಂದ ಸುಂದರ ಮುಖ ನಿಮ್ಮದಾಗಿಸಿಕೊಳ್ಳಿ!

Relationship Tips ಈ ವಿಷಯಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು, ಮುಜುಗರಪಟ್ಟುಕೊಂಡರೆ ಅಪಾಯ ನಿಶ್ಚಿತ

women search on google: ಮದುವೆಯಾದ ನಂತರ ಮಹಿಳೆಯರು ಗೂಗಲ್‌ನಲ್ಲಿ ಹೆಚ್ಚು ಹುಡುಕಾಡಿದ್ದೇನು?

Late marriage 30 ವರ್ಷಗಳ ನಂತರ ಮದುವೆಯಾದರೆ ಏನಾಗುತ್ತದೆ?

TAGGED:Increased cases of heart attackstroke in winter: Do this to avoid it
Share This Article
Facebook Twitter Copy Link Print
Previous Article Bhovi corporation scam ವಕೀಲೆಯನ್ನೇ ಬೆತ್ತಲೆಗೊಳಿಸಿ ವಿಚಾರಣೆ ನಡೆಸಿದ ಸಿಐಡಿ ತನಿಖಾಧಿಕಾರಿ, 25 ಲಕ್ಷ ರೂ. ಲಂಚಕ್ಕೆ ಬೇಡಿಕೆ! ನೊಂದ ಜೀವಾ ಆತ್ಮಹ*ತ್ಯೆ, ಸಹೋದರಿ ದೂರು
Next Article Big Boss Kannada 11 | ಅಚ್ಚರಿಯ ಎಲಿಮಿನೇಷನ್, ಬಿಗ್ ಬಾಸ್ ಮನೆಯಿಂದ ಹೊರಬಂದ ನಟ ಧರ್ಮ ಕೀರ್ತಿರಾಜ್

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?