newsics.com
ಶಿವಮೊಗ್ಗ: ಸುತ್ತಿಗೆಯಿಂದ ತಲೆಗೆ ಹೊಡೆದು ಮಗನಿಂದಲೇ ತಂದೆಯ ಹತ್ಯೆ. ತಂದೆ ಹಾಗೂ ಮಗನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ.
ಮುಸ್ತಾಫ ಬೇಗ್ (42) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಆತನ ಮಗ ಶಾಹಿದ್ ಬೇಗ್ (22) ಕೊಲೆಗೈದ ಆರೋಪಿಯಾಗಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸುತ್ತಿಗೆಯಿಂದ ಆರೋಪಿ ತನ್ನ ತಂದೆಯ ತಲೆಗೆ ಹೊಡೆದಿದ್ದಾನೆ. ಇದರಿಂದ ಮುಸ್ತಾಫ ಬೇಗ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.