newsics.com
ರಾಮನಗರ: ಇಡೀ ರಾಜ್ಯವೇ ಬೆಚ್ಚಿಬೀಳುವಂತಹ ಅಮಾನವೀಯ ಘಟನೆಯೊಂದು ರಾಮನಗರದಲ್ಲಿ ನಡೆದಿದೆ.
ಎರಡು ದಿನದ ಹಿಂದಷ್ಟೇ ಹುಟ್ಟಿದ ಮಗುವನ್ನು ಆಸ್ಪತ್ರೆ ಟಾಯ್ಲೆಟ್‌ನಲ್ಲಿ ಹಾಕಿ ಫ್ಲಶ್ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ದಯಾನಂದ್ ಸಾಗರ್ ಆಸ್ಪತ್ರೆಯಲ್ಲಿ ಈ ಭಯಾನಕ ಘಟನೆ ನಡೆದಿದ್ದು, ಟಾಯ್ಲೆಟ್ ಪರಿಶೀಲನೆ ವೇಳೆ ಶಿಶುವಿನ ಶವ ಪತ್ತೆಯಾಗಿದೆ. ಟಾಯ್ಲೆಟ್ ಗುಂಡಿಯಲ್ಲಿ ಮೃತದೇಹವಿರುವುದನ್ನು ಕಂಡು ಆಸ್ಪತ್ರೆ ಸಿಬ್ಬಂದಿ ಹೌಹಾರಿದ್ದಾರೆ.
ತಾಯಿಯೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದೆ ಪೊಲೀಸರು ತಿಳಿಸಿದ್ದಾರೆ.
ಟಾಯ್ಲೆಟ್ ಗುಂಡಿಯಲ್ಲಿ ಎರಡು ದಿನದ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದ್ದು, ಹಾರೋಹಳ್ಳಿ ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ. ಮಗುವಿನ ತಾಯಿ ಯಾರು? ಈ ಕೃತ್ಯ ಎಸಗಿದವರು ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.
Gold and Silver Price ಚಿನ್ನ ತುಸು ಅಗ್ಗ, ಬೆಳ್ಳಿ ಬೆಲೆಯಲ್ಲಿಲ್ಲ ವ್ಯತ್ಯಾಸ
Shabarimale Ayyappa ಅಯ್ಯಪ್ಪ ಸ್ವಾಮಿ ಮೆಟ್ಟಿಲ ಮೇಲೆ 23 ಪೊಲೀಸರ ಫೋಟೋಶೂಟ್: ಹೈಕೋರ್ಟ್‌ಗೆ ಇಂದು ವರದಿ ಸಲ್ಲಿಕೆ