Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health Care ಬೆಂಗಳೂರು ಸೇರಿ ರಾಜ್ಯದಲ್ಲಿ ವಿಪರೀತ ಚಳಿ: ವೈರಲ್ ಜ್ವರ, ಉಸಿರಾಟ ಸಮಸ್ಯೆ ಹೆಚ್ಚಳ, ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಏನೇನು?
ಆರೋಗ್ಯಕರ್ನಾಟಕಪ್ರಮುಖ

Health Care ಬೆಂಗಳೂರು ಸೇರಿ ರಾಜ್ಯದಲ್ಲಿ ವಿಪರೀತ ಚಳಿ: ವೈರಲ್ ಜ್ವರ, ಉಸಿರಾಟ ಸಮಸ್ಯೆ ಹೆಚ್ಚಳ, ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಏನೇನು?

Share
2 Min Read
SHARE

newsics.com

ಬೆಂಗಳೂರು: ಚಂಡಮಾರುತ ಪ್ರಭಾವದ ಮಳೆ ಹಾಗೂ ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ತಾಪಮಾನ ತೀವ್ರವಾಗಿ ಕುಸಿಯುತ್ತಿದೆ..ಇದರಿಂದ ವೈರಲ್ ಜ್ವರ, ಫ್ಲೂ ಸೋಂಕು ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಜ್ವರ, ಉಸಿರಾಟದ ಸೋಂಕುಗಳು ಮತ್ತು ಇನ್‌ಫ್ಲುಯೆಂಜಾ ಚಿಕಿತ್ಸೆಗೆ ಬರುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಫ್ಲೂ ಪ್ರಕರಣಗಳು ಮತ್ತು ಇತರ ವೈರಲ್ ಉಸಿರಾಟದ ಸೋಂಕುಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ ಎಂದು ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗಳ ಮೆಡಿಸಿನ್ ಸಲಹೆಗಾರ ಡಾ. ಶೀತಲ್ ಚೌರಾಸಿಯಾ ತಿಳಿಸಿದ್ದಾರೆ.

ಬೆಂಗಳೂರಿನಲ್ಲೂ ವೈರಲ್ ಸೋಂಕು, ಉಸಿರಾಟದ ಸೋಂಕು ಪ್ರಕರಣಗಳಲ್ಲಿ ಗಣನೀಯ ಏರಿಕೆ ಕಂಡುಬರುತ್ತಿದೆ. ಅನೇಕ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗಗಳು ಪ್ರತಿ ದಿನ ರಷ್ ಆಗಿರುತ್ತವೆ. ಸಾಂಕ್ರಾಮಿಕ ತಡೆಯುವ ನಿಟ್ಟಿನಲ್ಲಿ ಕೋವಿಡ್ ಸಂದರ್ಭದಲ್ಲಿ ಪಾಲಿಸುತ್ತಿದ್ದ ಮುನ್ನೆಚ್ಚರಿಕೆಗಳನ್ನು ಪಾಲಿಸುವ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ವೈರಲ್ ಸೋಂಕು ಪ್ರಕರಣ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಆಸ್ತಮಾ ಅಥವಾ ಅಲರ್ಜಿ ಹೊಂದಿರುವ ವ್ಯಕ್ತಿಗಳಲ್ಲಿ ರೋಗಲಕ್ಷಣಗಳು ತೀವ್ರವಾಗಿರಲಿವೆ. ಹೀಗಾಗಿ ಇಂಥ ಸಮಸ್ಯೆ ಇರುವವರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಜ್ಞ ವೈದ್ಯರು ಹೇಳಿದ್ದಾರೆ.
ಚಳಿಗಾಲದಲ್ಲಿ ವಿಶೇಷವಾಗಿ ಮಕ್ಕಳು ಹೆಚ್ಚು ದುರ್ಬಲರಾಗಿರುತ್ತಾರೆ. ಹೀಗಾಗಿ ಅವರಿಗೆ ಸೋಂಕುಗಳು ತಗಲುವ ಸಾಧ್ಯತೆ ಹೆಚ್ಚು ಎಂದು ಆಸ್ಟರ್ ಸಿಎಂಐ ಆಸ್ಪತ್ರೆಯ ಹಿರಿಯ ಸಲಹೆಗಾರ್ತಿ (ನಿಯೋನಾಟಾಲಜಿ ಮತ್ತು ಪೀಡಿಯಾಟ್ರಿಕ್ಸ್) ಡಾ. ಪರಿಮಳಾ ವಿ. ತಿರುಮಲೇಶ್ ಹೇಳಿದ್ದಾರೆ. ಶೀತ, ಶುಷ್ಕ ಗಾಳಿ ಮತ್ತು ಹೆಚ್ಚಿದ ಒಳಾಂಗಣ ಚಟುವಟಿಕೆಗಳು ಇನ್ಫ್ಲುಯೆಂಜಾ ಮತ್ತು ಇತರ ಉಸಿರಾಟದ ಸೋಂಕುಗಳು ಹರಡಲು ಸೂಕ್ತವಾದ ವಾತಾವರಣವನ್ನು ಸೃಷ್ಟಿಸುತ್ತವೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವ ಶಿಶುಗಳು ಮತ್ತು ಚಿಕ್ಕ ಮಕ್ಕಳಿಗೆ ಹೆಚ್ಚಿನ ಅಪಾಯವಿದೆ ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಉಸಿರಾಟ ಸಂಬಂಧಿತ ಸೋಂಕು ಪ್ರಕರಣಗಳಲ್ಲಿ ಶೇ.20 ರಷ್ಟು ಹೆಚ್ಚಳವಾಗಿದೆ ಎಂದು ಅವರು ತಿಳಿಸಿದ್ದಾರೆ. ಆಸ್ಪತ್ರೆಗೆ ಬರುವವರಲ್ಲಿ ಶೇ.70ಕ್ಕಿಂತ ಹೆಚ್ಚು ಪ್ರಕರಣಗಳು ಉಸಿರಾಟದ ಕಾಯಿಲೆಗಳಿಗೆ ಸಂಬಂಧಿಸಿವೆ ಎಂದು ಡಾ.ಪರಿಮಳಾ ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಏನೇನು?

ಶುಚಿತ್ವ ಕಾಪಾಡಿ ಮತ್ತು ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ತೆಗೆದುಕೊಂಡ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿ.

ಕಿಕ್ಕಿರಿದ ಜನಸಂದಣಿ ಇರುವ ಅಥವಾ ಕಳಪೆ ಗಾಳಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಿ.

ಆಗಾಗ ಬಿಸಿ ನೀರು ಕುಡಿಯುತ್ತಿರಿ ಮತ್ತು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಿ.

ಸಮಯೋಚಿತ ವೈದ್ಯಕೀಯ ಆರೈಕೆಯನ್ನು ಪಡೆಯಿರಿ ಮತ್ತು ರೋಗಲಕ್ಷಣಗಳು ಉಲ್ಬಣಗೊಂಡರೆ ಅಥವಾ ಮುಂದುವರಿದರೆ ತಜ್ಞ ವೈದ್ಯರನ್ನು ಸಂಪರ್ಕಿಸಿ.

ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ. ಅನಾರೋಗ್ಯದ ಸಂದರ್ಭದಲ್ಲಿ ಜನಸಂದಣಿಯಲ್ಲಿ ಬೆರೆಯದಿರಿ. ಸೋಂಕು ತಗುಲಿದಲ್ಲಿ ಔಷಧ, ಚಿಕಿತ್ಸೆ ಜತೆಗೆ ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳಿ ಮತ್ತು ಅತಿಯಾದ ಕೆಲಸವನ್ನು ತಪ್ಪಿಸುವುದು ಒಳ್ಳೆಯದು.

Relationship Tips ಪ್ರತಿದಿನ ಬೆಳಗ್ಗೆ ಹೀಗೆ ಮಾಡಿದರೆ ಪತಿ- ಪತ್ನಿಯರ ನಡುವೆ ಜಗಳ ಆಗುವುದಿಲ್ಲ

Plot to kill PM Modi ಪ್ರಧಾನಿ ಮೋದಿ ಹತ್ಯೆಗೆ ಸಂಚು: ಮುಂಬೈ ಪೊಲೀಸ್ ಕಂಟ್ರೋಲ್‌ ರೂಮ್‌ಗೆ ಅಪರಿಚಿತ ಮಹಿಳೆ ಬೆದರಿಕೆ ಕರೆ, ತನಿಖೆ ಶುರು

TAGGED:Extreme cold in the state including Bangalore: Viral feverincrease in respiratory problemswhat is the doctor's advice for precaution?
Share This Article
Facebook Twitter Copy Link Print
Previous Article Inhuman incident ಟಾಯ್ಲೆಟ್ ಗುಂಡಿಗೆ ನವಜಾತ ಶಿಶು ಹಾಕಿ ಫ್ಲಶ್ ಮಾಡಿದ್ರು…, ರಾಮನಗರ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ
Next Article Plot to kill PM Modi ಪ್ರಧಾನಿ ಮೋದಿ ಹತ್ಯೆಗೆ ಸಂಚು: ಮುಂಬೈ ಪೊಲೀಸ್ ಕಂಟ್ರೋಲ್‌ ರೂಮ್‌ಗೆ ಅಪರಿಚಿತ ಮಹಿಳೆ ಬೆದರಿಕೆ ಕರೆ, ತನಿಖೆ ಶುರು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?