newsics.com
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಹೇಳಿಕೆ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಒಕ್ಕಲಿಗ ಮಠದ ಚಂದ್ರಶೇಖರನಾಥ ಶ್ರೀಗಳಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಡಿಸೆಂಬರ್ 2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚಂದ್ರಶೇಖರನಾಥ ಸ್ವಾಮೀಜಿ ವಿವಾದದ ಕಿಡಿ ಹೊತ್ತಿಸಿದ್ದಾರೆ. ವಕ್ಫ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಮತದಾನದ ಹಕ್ಕಿಗೆ ಕೈಹಾಕಿದ್ದಾರೆ. ಮುಸ್ಲಿಮರಿಗೆ ಮತದಾನದ ಪವರ್ ಇಲ್ಲದಂತೆ ಮಾಡಿಬಿಡಬೇಕು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ವಿವಾದ ದೊಡ್ಡದಾಗುತ್ತಿದ್ದಂತೆ ಚಂದ್ರಶೇಖರನಾಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದರು. ಅದು ಬಾಯಿ ತಪ್ಪಿ ಆಡಿದ ಮಾತು. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.
ಸ್ವಾಮೀಜಿಗೆ ಧೈರ್ಯ ಹೇಳಿದ ಬಿಜೆಪಿ ನಾಯಕರು
ಇನ್ನು ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR ಹಿನ್ನೆಲೆ ಆರ್.ಅಶೋಕ್ ಮತ್ತು ಡಾ.ಅಶ್ವತ್ಥ್ ನಾರಾಯಣ ಸ್ವಾಮೀಜಿಯನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಕೆಲಹೊತ್ತು ಮಾತುಕತೆ ನಡೆಸಿ ಸ್ವಾಮೀಜಿಗೆ ಧೈರ್ಯ ಹೇಳಿದ್ದಾರೆ.
ಸ್ವಾಮೀಜಿ ಭೇಟಿ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ನಿಮ್ಮ ನೋಟಿಸ್, ಗೊಡ್ಡು ಬೆದರಿಕೆಗೆ ಸ್ವಾಮೀಜಿಗಳು ಹೆದರಲ್ಲ. ಇಡೀ ಸಮಾಜ ಸ್ವಾಮೀಜಿಯವರ ಜತೆಗಿದೆ. ಕಾಂಗ್ರೆಸ್ ಸರ್ಕಾರ ಒಕ್ಕಲಿಗರ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ಈ ಸರ್ಕಾರ ಸ್ವಾಮೀಜಿಯನ್ನು ಮುಟ್ಟಿದ್ರೆ ಸಮಾಜ ತಿರುಗಿ ಬೀಳುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಪ್ರಿಯತಮೆ ಅಸ್ಸಾಂನ ಮಾಯಾ ಕೊಲೆಗೈದು ಹೊರ ರಾಜ್ಯಕ್ಕೆ ಪರಾರಿಯಾಗಿದ್ದ ಆರೋಪಿ ಬೆಂಗಳೂರಲ್ಲೇ ಬಂಧನ
Big Boss Kannada 11 | ತೆಲುಗಲ್ಲಿ ಭೇಷ್ ಎನಿಸಿಕೊಂಡ ನಟಿ ಶೋಭಾ ಶೆಟ್ಟಿ ಇಲ್ಲೇಕೆ ಹೀಗೆ?