Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain‌ and heavy cold | ಫೆಂಗಲ್ ಎಫೆಕ್ಟ್: ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಮಳೆ,‌ ಭಾರೀ ಚಳಿ
ಕರ್ನಾಟಕದೇಶಪ್ರಮುಖ

Rain‌ and heavy cold | ಫೆಂಗಲ್ ಎಫೆಕ್ಟ್: ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಮಳೆ,‌ ಭಾರೀ ಚಳಿ

Share
3 Min Read
SHARE

newsics.com

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ‌ ಹಲವೆಡೆ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ‌ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತ ಪರಿಣಾಮವಾಗಿ ತಮಿಳುನಾಡಿನಲ್ಲಿ ವ್ಯಾಪಕ‌ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯುಟ್‌ನಿಂದ ಓರ್ವ ಮೃತಪಟ್ಟಿದ್ದಾನೆ. ಭಾರೀ ಮಳೆ ಹಿನ್ನೆಲೆಯಲ್ಲಿ ಏಳು ಸಬ್‌ವೇಗಳನ್ನು ಬಂದ್ ಮಾಡಲಾಗಿದೆ.

ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ. ಸೋಮವಾರ ಮತ್ತು ಮಂಗಳವಾರ ಕೊಡಗು ಜಿಲ್ಲೆಗೆ, ಸೋಮವಾರ ಒಂದು ದಿನ ಮೈಸೂರು ಜಿಲ್ಲೆಗೆ ಆರೆಂಜ್‌ ಅಲರ್ಟ್, ರಾಮನಗರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ ಜಿಲ್ಲೆಗೆ ನಾಳೆಯಿಂದ ಮೂರು ದಿನ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದಂತೆ ಮೈಸೂರು ಜಿಲ್ಲೆಗೆ ಆರೆಂಜ್‌ ಅಲರ್ಟ್ ಜೊತೆಗೆ ಭಾನುವಾರ ಮತ್ತು ಮಂಗಳವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಮೂರು ದಿನಗಳ ಕಾಲ ದಕ್ಷಿಣ ಒಳನಾಡಿನ ಕರ್ನಾಟಕದ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ತುಮಕೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 1 ರಿಂದ 2 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ:

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ ಸುಮಾರು 25 ಮತ್ತು 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹೇಳಿದೆ.

ತಾಪಮಾನ ಗಣನೀಯ ಇಳಿಕೆ:

ರಾಜ್ಯಾದ್ಯಂತ ತೀವ್ರ ಚಳಿಯ ಅನುಭವವಾಗುತ್ತಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರಿನಲ್ಲಿ ಗರಿಷ್ಠ 31 ಮತ್ತು ಕನಿಷ್ಠ 24, ಶಿವಮೊಗ್ಗದಲ್ಲಿ ಗರಿಷ್ಠ 29 ಮತ್ತು ಕನಿಷ್ಠ 18, ಬೆಳಗಾವಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 17, ಮೈಸೂರಿನಲ್ಲಿ ಗರಿಷ್ಠ 26 ಮತ್ತು ಕನಿಷ್ಠ 20, ಮಂಡ್ಯದಲ್ಲಿ ಗರಿಷ್ಠ 27 ಮತ್ತು ಕನಿಷ್ಠ 20 ಮತ್ತು ಹುಬ್ಬಳ್ಳಿಯಲ್ಲಿ ಗರಿಷ್ಠ 29 ಕನಿಷ್ಠ 17 ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ವಾಡಿಕೆಯಂತೆ ಡಿಸೆಂಬರ್ ಎರಡನೇ ವಾರ ಚಳಿ ತೀವ್ರವಾಗುತ್ತಿತ್ತು. ಆದರೆ, ಈ ಬಾರಿ ನವೆಂಬರ್‌ನಲ್ಲೇ ಚಳಿಯ ಪ್ರಮಾಣ ಹೆಚ್ಚಳವಾಗಿದೆ. ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ. ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ರಿಂದ 5 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ ಎಂದು ಹೇಳಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮತ್ತು ಚಳಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿಗೂ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ವೈಪರೀತ್ಯದ ಕಾರಣ ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಮೈಕೊರೆಯುವ ಚಳಿ ಇರಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ. ಎಸ್. ಪಾಟೀಲ್ ಹೇಳಿದ್ದಾರೆ.

TAGGED:Fengal Effect: Rainheavy cold for two more days in many parts of the state
Share This Article
Facebook Twitter Copy Link Print
Previous Article Kash Patel | ಭಾರತ ಮೂಲದ ಕಾಶ್ ಪಟೇಲ್ ಎಫ್‌ಬಿಐನ ಹೊಸ ನಿರ್ದೇಶಕ: ಟ್ರಂಪ್ ಅಧಿಕೃತ ಘೋಷಣೆ
Next Article Wakf Board | ವಕ್ಫ್ ಮಂಡಳಿ ವಿಸರ್ಜಿಸಿದ ಸರ್ಕಾರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?