newsics.com
ಹೈದರಾಬಾದ್: ಕನ್ನಡದ ‘ಬ್ರಹ್ಮಗಂಟು’ ಧಾರಾವಾಹಿ ಖ್ಯಾತಿಯ ಕಿರುತೆರೆ ಹಾಗೂ ಚಿತ್ರನಟಿ ಶೋಭಿತಾ ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕನ್ನಡ ಕಿರುತೆರೆಯ ಖ್ಯಾತ ನಟಿಯಾಗಿದ್ದ ಶೋಭಿತಾ, ಬ್ರಹ್ಮಗಂಟು ಧಾರವಾಹಿಯಿಂದ ಜನಪ್ರಿಯತೆ ಪಡೆದಿದ್ದರು. ಮದುವೆ ಬಳಿಕ ಹೈದರಾಬಾದ್‌ನಲ್ಲಿ ವಾಸವಾಗಿದ್ದ ಶೋಭಿತಾ, ಇದೀಗ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶನಿವಾರ ತಡರಾತ್ರಿ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ನಟಿಯ ದುಡುಕಿನ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾಗಿರುವ ಪೋಷಕರು ಹೈದರಾಬಾದ್‌ಗೆ ತೆರಳಿದ್ದಾರೆ.
ಹಿಟ್ಲರ್ ಕಲ್ಯಾಣ, ನಿನ್ನಿಂದಲೇ ಧಾರಾವಾಹಿಗಳಲ್ಲೂ ನಟಿಸಿದ್ದರು. ಅಲ್ಲದೆ ವಂದನಾ, ಅಟೆಂಪ್ಟ್ ಟು ಮರ್ಡರ್, ಜಾಕ್‌ಪಾಟ್, ಶತಭಿಷ ಚಿತ್ರಗಳಲ್ಲೂ ನಟಿಸಿದ್ದರು.
Uttara Kannada | ಪಶ್ಚಿಮಘಟ್ಟ ಪ್ರದೇಶದಲ್ಲಿ ಭೂಕಂಪನ: ಬೆಚ್ಚಿಬಿದ್ದ ಕುಮಟಾ, ಶಿರಸಿ ಜನ
Fengal Effect | ಚಂಡಮಾರುತದಿಂದ ಪ್ರತಿಕೂಲ ಹವಾಮಾನ, ಭಯ ಹುಟ್ಟಿಸಿದ ವಿಮಾನ ಲ್ಯಾಂಡಿಂಗ್ ಎಫರ್ಟ್! ವಿಡಿಯೋ ನೋಡಿ