Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fengal Effect ಚಂಡಮಾರುತ ಪರಿಣಾಮ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವ್ಯಾಪಕ ಮಳೆ, ಇನ್ನೆರಡು ದಿನ ಮುಂದುವರಿಕೆ, ಎಲ್ಲೆಡೆ ಶೀತ ಗಾಳಿ
ಕರ್ನಾಟಕಪ್ರಮುಖ

Fengal Effect ಚಂಡಮಾರುತ ಪರಿಣಾಮ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವ್ಯಾಪಕ ಮಳೆ, ಇನ್ನೆರಡು ದಿನ ಮುಂದುವರಿಕೆ, ಎಲ್ಲೆಡೆ ಶೀತ ಗಾಳಿ

Share
2 Min Read
SHARE

newsics.com

ಬೆಂಗಳೂರು: ಫೆಂಗಲ್ ಚಂಡಮಾರುತದ ಎಫೆಕ್ಟ್ ಮುಂದುವರಿದಿದ್ದು, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ ಸೋಮವಾರ ಬೆಳಗಿನಿಂದಲೂ ಜಿಟಿಜಿಟಿ ಮಳೆಯಾಗುತ್ತಿದ್ದು, ಜನಸಾಮಾನ್ಯರು ಪರದಾಡುವಂತಾಗಿದೆ.

ಚಂಡಮಾರುತ ಪರಿಣಾಮವಾಗಿ ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದ ನಿರಂತರವಾಗಿ ಮಳೆಯಾಗುತ್ತಿದೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಕೆಲವು ಭಾಗಗಳಲ್ಲಿ ಸೋಮವಾರ ಭಾರೀ ಮಳೆಯಾಗಲಿದೆ. ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಈ ಪ್ರದೇಶಗಳಲ್ಲಿ ಬುಧವಾರದಿಂದ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಿಗೆ ಸೋಮವಾರ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.

ಫೆಂಗಲ್ ಪ್ರಭಾವದಿಂದ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಭಾನುವಾರದಿಂದ ವ್ಯಾಪಕ ಮಳೆಯಾಗಿದೆ ಎಂದು ಅವರು ಹೇಳಿದರು.

ಐಎಂಡಿ ಅಧಿಕಾರಿಗಳ ಪ್ರಕಾರ, ಉಡುಪಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಿದೆ. ಆರೆಂಜ್ ಅಲರ್ಟ್ ಎಂದರೆ 11 ಮಿ.ಮೀ ನಿಂದ 20 ಮಿ.ಮೀ ವರೆಗಿನ ಭಾರೀ ಮಳೆ ಮತ್ತು ಹಳದಿ ಎಚ್ಚರಿಕೆ ಎಂದರೆ 6 ಮಿ.ಮೀ. ಮತ್ತು 11 ಮಿ.ಮೀ.ವರೆಗೆ ಮಳೆಯಾಗುತ್ತದೆ.

ಡಿಸೆಂಬರ್ 2ರಂದು, ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದರೆ ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಮೈಸೂರಿನಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಡಿಸೆಂಬರ್ 2 ಮತ್ತು 3ರಂದು, ದಕ್ಷಿಣ ಕರ್ನಾಟಕ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 35 ಕಿಲೋಮೀಟರ್‌ನಿಂದ 45 ಕಿಮೀ ಅಥವಾ 55 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು IMD ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

ಡಿಸೆಂಬರ್ 3ರಂದು ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಕೊಡಗು, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿದೆ.

ಉತ್ತರ ಕರಾವಳಿ ತಮಿಳುನಾಡು ಮತ್ತು ಪುದುಚೇರಿಯಲ್ಲಿನ ಫೆಂಗಲ್ ಚಂಡಮಾರುತ ಪಶ್ಚಿಮಕ್ಕೆ ಚಲಿಸಿದ್ದು ದುರ್ಬಲಗೊಂಡಿದೆ ಎಂದು IMD ತಿಳಿಸಿದೆ.

TAGGED:cold wind everywhereStorm effect: Widespread rain in many parts of the state including Bengaluru
Share This Article
Facebook Twitter Copy Link Print
Previous Article Day Prediction… ದಿನ ಭವಿಷ್ಯ… 02-12-2024, ಸೋಮವಾರ, ಸಿಂಹ: ಹಣಕಾಸಿನ ತೊಂದರೆ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Shobhita no more ನಟಿ ಶೋಭಿತಾ ಪೋಸ್ಟ್‌ಮಾರ್ಟಂ ಮುಕ್ತಾಯ, ಮೃತದೇಹ ಹಸ್ತಾಂತರ, ಹಾಸನದಲ್ಲಿ ಅಂತ್ಯಕ್ರಿಯೆ, ವೈದ್ಯರು ಹೇಳಿದ್ದೇನು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?