newsics.com
ಕಲಬುರಗಿ: ಹನ್ನೊಂದು ವರ್ಷದ ವಿದ್ಯಾರ್ಥಿನಿ ಮೇಲೆ ಶಾಲಾ ಮುಖ್ಯಸ್ಥ ಅತ್ಯಾಚಾರಗೈದ ಘಟನೆ ಕಲಬುರಗಿಯ ಯಡ್ರಾಮಿಯಲ್ಲಿ ನಡೆದಿದೆ.
ಖಾಸಗಿ ಶಾಲಾ ಮುಖ್ಯಸ್ಥ ಹಾಜಿಮಲಂಗ ಗಣಿಯಾರನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಘಟನೆ ಖಂಡಿಸಿ, ಉಗ್ರ ಶಿಕ್ಷೆಗೆ ಆಗ್ರಹಿಸಿ ತಾಲೂಕಿನ ವಿವಿಧ ಸಂಘಟನೆಗಳು ಯಡ್ರಾಮಿ ಬಂದ್ ಮಾಡಿ ಪ್ರತಿಭಟನೆ ಮಾಡಿದ್ರು.
ಶಾಲೆಯಲ್ಲಿ ಸಂತ್ರಸ್ತ ಮಗು ಕಳೆದ ಎರಡು- ಮೂರು ವರ್ಷಗಳಿಂದ ಓದುತ್ತಿದ್ದಾಳೆ. ಸದ್ಯ ಮಗು ಐದನೇ ತರಗತಿ ಓದುತ್ತಿದ್ದು, ಶಾಲೆಯ ಮುಖ್ಯಸ್ಥ ಹಾಜಿಮಲಂಗ ಗಣಿಯಾರ ಕಳೆದ ಎರಡು ದಿನದ ಹಿಂದೆ ಶಾಲೆಯಲ್ಲಿ ಅತ್ಯಾಚಾರಗೈದಿದ್ದಾನೆ.
ಇದಲ್ಲದೆ ವಿಷಯವನ್ನು ಮನೆಯಲ್ಲಿ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಮಗು ಮನೆಯಲ್ಲಿ ತಿಳಿಸಲು ಹಿಂಜರಿದಿದೆ. ನಂತರ ಪಕ್ಕದ ಮನೆಯವರ ಮುಂದೆ ಮಗು ವಿಷಯ ತಿಳಿಸಿದ್ದು, ಅವರು ಮಗುವಿನ ತಂದೆ, ತಾಯಿಗೆ ವಿಷಯ ತಿಳಿಸಿದ್ದಾರೆ. ನಂತರ ಸಂತ್ರಸ್ತ ಮಗುವಿನ ಪಾಲಕರು ತಮ್ಮ ಸಮುದಾಯದ ಎಲ್ಲ ಹಿರಿಯರೊಂದಿಗೆ ಚರ್ಚಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಪಿಎಸ್ ಐ ವಿಶ್ವನಾಥ್ ಮುದರೆಡ್ಡಿ ಹಾಗೂ ಅವರ ತಂಡ ಆರೋಪಿಯನ್ನು ಬಂಧಿಸಿದ್ದಾರೆ.