newsics.com
ಬೆಂಗಳೂರು: ಸಹಪಾಠಿಯೊಬ್ಬ 15 ಲಕ್ಷ ರೂಪಾಯಿ ಮೋಸ ಮಾಡಿದ್ದರಿಂದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರಾಜಾಜಿನಗರದಲ್ಲಿರುವ ತನ್ನ ಮನೆಯಲ್ಲಿಯೇ ಪ್ರಿಯಾಂಕಾ (19) ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ನವೆಂಬರ್ 29ರಂದು ಪ್ರಿಯಾಂಕಾ ತನ್ನ ಮನೆಯ ಬಾಲ್ಕನಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪ್ರಿಯಾಂಕಾ ಡೆತ್ ನೋಟ್ ಬರೆದಿಟ್ಟಿದ್ದು, ತನ್ನ ಕಾಲೇಜು ಸಹಪಾಠಿ ದಿಗಂತ್ ತನಗೆ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಹೂಡಿಕೆ ನೆಪದಲ್ಲಿ ಚಿನ್ನಾಭರಣಗಳನ್ನು ಪಡೆದು ವಂಚನೆ ಮಾಡಿದ್ದಾನೆ ಎಂದು ಬರೆದಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.
ತನ್ನಲ್ಲಿದ್ದ ಅಪಾರ ಮೌಲ್ಯದ ಚಿನ್ನಾಭರಣಗಳನ್ನು ತೆಗೆದುಕೊಂಡು ಕ್ಯಾಸಿನೋಗಳಲ್ಲಿ ಆತ ಹೂಡಿಕೆ ಮಾಡಿದ್ದ ಎಂದು ದಿಗಂತ್ ಬಗ್ಗೆ ಪ್ರಿಯಾಂಕಾ ತಿಳಿಸಿದ್ದಾಳೆ ಎಂದು ಎಫ್‌ಐಆರ್‌ನಲ್ಲಿ ದಾಖಲಾಗಿದೆ. ಆಕೆ ಪದೇ ಪದೇ ಚಿನ್ನಾಭರಣವನ್ನು ವಾಪಸ್ ನೀಡುವಂತೆ ಕೇಳಿದರೂ, ದಿಗಂತ್ ಹಿಂದಿರುಗಿಸಲು ವಿಫಲನಾಗಿದ್ದ.
ಭರತ್ ಕುಮಾರ್ ನೀಡಿದ ದೂರಿನ ಮೇರೆಗೆ ರಾಜಾಜಿನಗರ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
shilpa shetty yoga: ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
relationship: ಹೊಸದಾಗಿ ಮದುವೆಯಾದವರೇ? ಫಸ್ಟ್ ನೈಟ್ ಗೂ ಮುನ್ನ ಈ ವಿಷಯಗಳನ್ನು ತಿಳಿದುಕೊಳ್ಳಿ…
‘Silk Smitha’ ಬಯೋಪಿಕ್: ಬೋಲ್ಡ್ ಬ್ಯೂಟಿಯ ಪಾತ್ರದಲ್ಲಿ ಚಂದ್ರಿಕಾ ರವಿ