newsics.com
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರು ಆಯ್ಕೆಯಾಗಿದ್ದಾರೆ. ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ನೂತನ ಸಿಎಂ ಎಂದು ಘೋಷಣೆ ಮಾಡಲಾಯಿತು.ಇನ್ನೂ ಮಹಾಯುತಿಯಿಂದ ದೇವೇಂದ್ರ ಫಡ್ನವೀಸ್ ಹೆಸರು ಘೋಷಣೆಯೊಂದೇ ಬಾಕಿ ಇದೆ.
ಹೌದು ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಏರುವ ವಿಚಾರದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳ ನಡುವೆ ನಡೆದಿದ್ದ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರು ಆಯ್ಕೆಯಾಗಿದ್ದಾರೆ. ನಾಳೆ ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ನೇತೃತ್ವದ ಸರ್ಕಾರದಲ್ಲಿ ಏಕನಾಥ್ ಶಿಂಧೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಶಾಸಕರ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಹೆಸರಿನಲ್ಲಿ ಪ್ರಸ್ತಾವನೆ ತರಲು ಬಿಜೆಪಿ ಕೋರ್ ಕಮಿಟಿಯಲ್ಲಿ ತೀರ್ಮಾನಿಸಲಾಗಿದೆ. ಸುಧೀರ್ ಮುಂಗಂತಿವಾರ್ ಮತ್ತು ಚಂದ್ರಕಾಂತ್ ಪಾಟೀಲ್ ಇಬ್ಬರೂ ದೇವೇಂದ್ರ ಫಡ್ನವಿಸ್ ಹೆಸರನ್ನು ಪ್ರಸ್ತಾಪಿಸದ್ದಾರೆ. ಸುಧೀರ್ ಮುಂಗಂತಿವಾರ್ ಮತ್ತು ಚಂದ್ರಕಾಂತ್ ಪಾಟೀಲ್ ಇಬ್ಬರೂ ದೇವೇಂದ್ರ ಫಡ್ನವಿಸ್ ಹೆಸರನ್ನು ಪ್ರಸ್ತಾಪಿದ್ದಾರೆ.
ಮುಖ್ಯಮಂತ್ರಿ ಆಯ್ಕೆಗಾಗಿ ಭಾರತೀಯ ಜನತಾ ಪಕ್ಷವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರನ್ನು ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರನ್ನಾಗಿ ಮಾಡಿದೆ.
ಮಹಾರಾಷ್ಟ್ರದ ಹೊಸ ಸರ್ಕಾರ ಡಿಸೆಂಬರ್ 5 ರಂದು ಪ್ರಮಾಣ ವಚನ ಸ್ವೀಕರಿಸಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮೈತ್ರಿಕೂಟ ಭರ್ಜರಿ ಗೆಲುವು ದಾಖಲಿಸಿದೆ. ಮೈತ್ರಿಕೂಟ 230 ವಿಧಾನಸಭಾ ಸ್ಥಾನಗಳನ್ನು ಗೆದ್ದಿದೆ. ಇದರಲ್ಲಿ ಬಿಜೆಪಿ ಗರಿಷ್ಠ 132 ಸ್ಥಾನಗಳನ್ನು ಪಡೆದಿದೆ. ಏಕನಾಥ್ ಶಿಂಧೆ ಅವರ ಶಿವಸೇನೆ 57 ಸ್ಥಾನಗಳಲ್ಲಿ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದಿದೆ