Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Areca nut Study ಅಡಕೆ ಕುರಿತು ಸಾಕ್ಷ್ಯಾಧಾರಿತ ಅಧ್ಯಯನಕ್ಕೆ ಕೇಂದ್ರ ಸರ್ಕಾರ ನಿರ್ಧಾರ, ಬೆಳೆಗಾರರ ಆತಂಕ ಶಮನಕ್ಕೆ ಕ್ರಮ
ಕರ್ನಾಟಕದೇಶಪ್ರಮುಖ

Areca nut Study ಅಡಕೆ ಕುರಿತು ಸಾಕ್ಷ್ಯಾಧಾರಿತ ಅಧ್ಯಯನಕ್ಕೆ ಕೇಂದ್ರ ಸರ್ಕಾರ ನಿರ್ಧಾರ, ಬೆಳೆಗಾರರ ಆತಂಕ ಶಮನಕ್ಕೆ ಕ್ರಮ

Share
2 Min Read
SHARE

newsics.com

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಅಧ್ಯಯನವೊಂದರಲ್ಲಿ ಅಡಕೆಯೂ ಕ್ಯಾನ್ಸರ್ ಕಾರಕ ಎಂಬ ಅಂಶವನ್ನು ಹೇಳಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಬೆಳೆಗಾರರಲ್ಲಿ ಎದ್ದಿರುವ ಆತಂಕ ಶಮನಕ್ಕೆ ಕೇಂದ್ರ ಮುಂದಾಗಿದೆ.

ವಿಶ್ವ ಆರೋಗ್ಯ ಸಂಸ್ಥೆ ಅಡಕೆಯನ್ನು ಕ್ಯಾನ್ಸರ್ ಕಾರಕ ಎಂದು ವರ್ಗೀಕರಿಸಿದ ಹಿನ್ನೆಲೆಯಲ್ಲಿ ಈಗ ಕೇಂದ್ರ ಸರಕಾರವು ಅಡಕೆ ಮತ್ತು ಮಾನವನ ಆರೋಗ್ಯ ಎಂಬ ವಿಷಯದಲ್ಲಿ ಸಾಕ್ಷಿ ಆಧರಿತ ಅಧ್ಯಯನ ಕೈಗೊಳ್ಳಲು ನಿರ್ಧರಿಸಿದೆ. ಈ ಮೂಲಕ ಅಡಕೆ ಬೆಳೆಗಾರರ ಹಿತರಕ್ಷಣೆ ಕುರಿತು ಭರವಸೆ ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆ ಅಡಕೆ ಕ್ಯಾನ್ಸರ್ ಕಾರಕ ಎಂಬ ವರದಿ ನೀಡಿದ ಹಿನ್ನೆಲೆಯಲ್ಲಿ ಅಡಕೆ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದರು. ಈ ಕುರಿತು ಕಾಸರಗೋಡು ಸಂಸದ ರಾಜಮೋಹನ ಉಣ್ಣಿತ್ತಾನ್ ಲೋಕಸಭೆಯಲ್ಲಿ ಪ್ರಶ್ನೆ ಕೇಳಿದ್ದರು. ಈ ಲಿಖಿತ ಪ್ರಶ್ನೆಗೆ ಕೃಷಿ ಸಚಿವಾಲಯ ಉತ್ತರ ನೀಡಿದೆ.

ಅಡಕೆಯ ಔಷಧೀಯ ಗುಣಗಳ ಕುರಿತು ಸಂಶೋಧನೆ ಮಾಡುವುದಾಗಿ ಸಚಿವಾಲಯವು ಲಿಖಿತ ಉತ್ತರ ನೀಡಿದೆ. ಈ ಅಧ್ಯಯನವು ಸುಮಾರು 16 ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಸಂಸ್ಥೆಗಳ ಮೂಲಕ ನಡೆಸಲಾಗುತ್ತದೆ. ಆಲ್ ಇಂಡಿಯಾ ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಸೇರಿದಂತೆ ವೈದ್ಯಕೀಯ ಸಂಶೋಧನೆಯೊಂದಿಗೆ ಇತರ ಸಂಸ್ಥೆಗಳು ಅಡಕೆಯ ಪರಿಣಾಮದ ಕುರಿತ ವಿವರವಾದ ಸಂಶೋಧನೆ ನಡೆಸಲಿದ್ದಾರೆ ಎಂದು ಲಿಖಿತ ಉತ್ತರ ನೀಡಲಾಗಿದೆ.

ಅಡಕೆ ಬೆಳೆಗಾರರು ಈಗ ಎದುರಿಸುತ್ತಿರುವ ಸವಾಲುಗಳ ಕುರಿತು ಸರಕಾರಕ್ಕೆ ಅರಿವಿದೆ. ವಿಶ್ವ ಆರೋಗ್ಯ ಸಂಸ್ಥೆ ಉಲ್ಲೇಖಿಸಿರುವ ಅಡಕೆಯ ಆರೋಗ್ಯದ ಪರಿಣಾಮಗಳ ಕುರಿತು ಕೆಲವು ಸಂಶೋಧನಾ ಪ್ರಬಂಧಗಳಲ್ಲಿ ಕೆಲ ಮಿತಿಗಳಿವೆ. ಹೀಗಾಗಿ ಆಗಾಗ ಕೆಲವು ವ್ಯತಿರಿಕ್ತವಾದ ವರದಿಗಳಿಗೆ ಕಾರಣವಾಗಿದೆ. ಈ ಕಾರಣದಿಂದ ಇನ್ನೊಮ್ಮೆ ಪ್ರತ್ಯೇಕವಾದ ಅಧ್ಯಯನ ನಡೆಯಲಿದೆ. ಹೆಚ್ಚಿನ ಅಧ್ಯಯನಗಳು ಹುಡಿ ಅಡಕೆ (ಕ್ವಿಡ್ ) ಮತ್ತು ಗುಟ್ಕಾದಂಥ ಮಿಶ್ರಣಗಳ ಆರೋಗ್ಯದ ಪರಿಣಾಮಗಳ ಮೇಲೆ ಕೆಂದ್ರೀಕರಿಸಿದೆ. ಇಲ್ಲಿ ಇತರ ಪದಾರ್ಥಗಳೊಂದಿಗೆ ಅಡಕೆ ಒಳಗೊಂಡಿದೆ. ಈ ಅಧ್ಯಯನಗಳು ಮಾನವನ ಆರೋಗ್ಯದ ಮೇಲೆ ಅಡಕೆಯ ಪ್ರತ್ಯೇಕ ಸೇವನೆಯ ಪರಿಣಾಮಗಳ ಕುರಿತು ಉಲ್ಲೇಖಿಸಿಲ್ಲ. ಹೀಗಾಗಿ ಪ್ರತ್ಯೇಕ ಅಧ್ಯಯನ ನಡೆಸಲಾಗುತ್ತದೆ.

2023ರ ನವೆಂಬರ್ ನಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ ಸೆಂಟ್ರಲ್ ಪ್ಲಾಂಟೇಶನ್ ಕ್ರಾಪ್ಸ್ ರಿಸರ್ಚ್ ಇನ್ಸಿಟಿಟ್ಯೂಟ್ ಕಾಸರಗೋಡು ಕೈಗೊಂಡಿರುವ ಅಧ್ಯಯನಗಳ ಪ್ರಕಾರ, ಅಡಕೆಯಲ್ಲಿ ಅರೆಕೊಲೈನ್ ಇರುವ ಕುರಿತು ಉಲ್ಲೇಖಿಸಿದ್ದವು. ಈ ಪ್ರಯೋಗಗಳಲ್ಲಿ ಬಳಸಲಾದ ಅರೆಕೊಲೀನ್ ಡೋಸೇಜ್ ಸಾಮಾನ್ಯ ಜಗಿಯುವ ಸಮಯದಲ್ಲಿ ಬಿಡುಗಡೆಯಾದ ಪ್ರಮಾಣಕ್ಕೆ ಹೋಲಿಸಿದರೆ, ಸ್ವಲ್ಪ ಹೆಚ್ಚಿದೆ ಎಂದು ಹೇಳಿತ್ತು ಎಂದು ಕೃಷಿ ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಭಾರತದಲ್ಲಿನ ಎಲ್ಲ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅಡಕೆ ಪ್ರಮುಖ ಸ್ಥಾನ ಪಡೆದಿದೆ. ಆಯುರ್ವೇದದಲ್ಲೂ ಅಡಕೆ ಔಷಧೀಯವಾಗಿ ಬಳಕೆಯಾಗುತ್ತದೆ ಎಂದು ಸಚಿವಾಲಯದ ಉತ್ತರದಲ್ಲಿ ತಿಳಿಸಲಾಗಿದೆ. ವೀಳ್ಯದೆಲೆಯೊಂದಿಗೆ ಅಡಕೆಯನ್ನು ಸಾಂಪ್ರದಾಯಿಕವಾಗಿಯೂ ಬಳಸಲಾಗುತ್ತದೆ. ಆಹಾರದ ನಂತರ ತಾಂಬೂಲ ಸೇವನೆಗೂ ಅಡಕೆ ಬಳಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಅಡಕೆ ಸುರಕ್ಷೆ, ಕ್ಯಾನ್ಸರ್ ರೋಗ ಶಮನಗೊಳಿಸುವ ಕುರಿತ ಆಯುರ್ವೇದ ಗುಣಗಳ ಕುರಿತು ಸಮಗ್ರ ಸಂಶೋಧನೆ ನಡೆಸಬೇಕು ಹಾಗೂ ಇದಕ್ಕಾಗಿ ಬಜೆಟ್ ನಲ್ಲಿ ಅನುದಾನ ನಿಗದಿಗೊಳಿಸಬೇಕು ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದರು.

PUSHPA 2 Released ಚಿತ್ರಮಂದಿರಲ್ಲಿ‌ ಕಾಲ್ತುಳಿತ: ಮಹಿಳೆ ಸಾವು, ಬಾಲಕನ ಸ್ಥಿತಿ ಗಂಭೀರ

Family Dispute ತಮ್ಮನನ್ನು ಕೊಂದು ಶವದ ಬಳಿ ಕುಳಿತು ಬೀಡಿ ಸೇದಿದ ಅಣ್ಣ!

Demand for Drumstick ಚಳಿ, ಶೀತ ಗಾಳಿ, ಮಳೆಯಿಂದ ನುಗ್ಗೆಕಾಯಿಗೆ ಭಾರೀ ಬೇಡಿಕೆ: ಬೆಲೆ ತಿಳಿದರೆ ಗಾಬರಿಯಾಗ್ತೀರಿ ನೀವು!

TAGGED:Central government's decision for evidence-based study on areca nut steps taken to ease farmers' anxiety
Share This Article
Facebook Twitter Copy Link Print
Previous Article Student death ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹ*ತ್ಯೆ
Next Article Actor Darshan ನಟ ದರ್ಶನ್‌ಗೆ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?