newsics.com
ಖ್ಯಾತ ನಟ ನಾಗ ಚೈತನ್ಯ ಹಾಗೂ ಬಹುಭಾಷಾ ನಟಿ ಶೋಭಿತಾ ಧೂಳಿಪಾಲ ದಾಂಪತ್ಯ ಜೀವನ ಆರಂಭಿಸಿದ್ದಾರೆ. ನಿನ್ನೆ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು.
ಅನ್ನಪೂರ್ಣ ಸ್ಟುಡಿಯೋದಲ್ಲಿ ಜೋಡಿ ಸಾಂಪ್ರದಾಯಿಕ ಹಿಂದೂ ಶೈಲಿಯಲ್ಲಿ ಹಸೆಮಣೆ ಏರಿದರು. ಈ ಸಮಾರಂಭದಲ್ಲಿ ಕುಟುಂಬದವರು, ಚಿತ್ರರಂಗದ ಗಣ್ಯರು, ಆಪ್ತರು, ಬಂಧುಗಳು ಪಾಲ್ಗೊಂಡಿದ್ದರು. ಮೆಗಾಸ್ಟಾರ್ ಚಿರಂಜೀವಿ ಕೂಡಾ ಮದುವೆ ಸಮಾರಂಭದಲ್ಲಿ ಭಾಗವಹಿಸಿ ನವದಂಪತಿಗಳನ್ನು ಆಶೀರ್ವದಿಸಿದರು.
ಅದ್ಧೂರಿ ವಿವಾಹ ಸಮಾರಂಭದಲ್ಲಿ ಚಿತ್ರರಂಗದ ಹಲವು ಗಣ್ಯರು ಭಾಗವಹಿಸಿದ್ದರು. ಸದ್ಯ ಈ ಮದುವೆ ಕಾರ್ಯಕ್ರಮದ ಫೋಟೋ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.