Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಟೇಸ್ಟ್ > KMF Idly Dosa Batter ಡಿಸೆಂಬರ್ ಅಂತ್ಯಕ್ಕೆ ಸಿಗಲಿದೆ ನಂದಿನಿ ಬ್ರ್ಯಾಂಡ್ ಇಡ್ಲಿ, ದೋಸೆ ಹಿಟ್ಟು!
ಕರ್ನಾಟಕಟೇಸ್ಟ್ಪ್ರಮುಖ

KMF Idly Dosa Batter ಡಿಸೆಂಬರ್ ಅಂತ್ಯಕ್ಕೆ ಸಿಗಲಿದೆ ನಂದಿನಿ ಬ್ರ್ಯಾಂಡ್ ಇಡ್ಲಿ, ದೋಸೆ ಹಿಟ್ಟು!

Share
2 Min Read
SHARE

newsics.com

ಬೆಂಗಳೂರು: ನಂದಿನಿ ಬ್ರ್ಯಾಂಡ್‌ನ ದೋಸೆ ಹಿಟ್ಟು ಡಿಸೆಂಬರ್ ಅಂತ್ಯದೊಳಗೆ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ ಎಂದು ಕೆಎಂಎಫ್ ತಿಳಿಸಿದೆ.

ಕೇರಳದ ಖಾಸಗಿ ಕಂಪನಿ ಮಾಲೀಕರ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ನಂದಿನಿ ಬ್ರಾಂಡ್ ದೋಸೆ ಹಿಟ್ಟು ಮಾರುಕಟ್ಟೆಗೆ ಮಾಡುತ್ತಿಲ್ಲ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಕೆಎಂಎಫ್ ಈ ನಿರ್ಧಾರ ಕೈಗೊಂಡಿದೆ.

ನಂದಿನಿ ಬ್ಯಾಂಡ್ ಅಡಿ ಡಿಸೆಂಬರ್ ಅಂತ್ಯದೊಳಗೆ ದೋಸೆಹಿಟ್ಟು ಮಾರುಕಟ್ಟೆ ಪ್ರವೇಶಿಸಲಿದೆ. ಈಗಾಗಲೇ ಟೆಂಡ‌ರ್ ಪ್ರಕ್ರಿಯೆ ಮುಕ್ತಾಯವಾಗಿದ್ದು, ವಾರದೊಳಗೆ ಕಾರ್ಯಾದೇಶ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ವರ್ಗಾವಣೆಗೂ, ದೋಸೆ ಹಿಟ್ಟಿಗೂ ಯಾವುದೇ ಸಂಬಂಧವಿಲ್ಲ. ಇದೊಂದು ಸಹಜ ಪ್ರಕ್ರಿಯೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದರು.

ಖಾಸಗಿ ಕಂಪನಿಯೊಂದು ಉತ್ಪಾದಿಸಿದ ದೋಸೆ ಹಿಟ್ಟನ್ನು ನಂದಿನಿ ಬ್ರ್ಯಾಂಡ್ ಪ್ಯಾಕೆಟ್‌ಗಳಲ್ಲಿ ತುಂಬಿಸಿ ಮಾರಾಟ ಮಾಡುವ ಪ್ರಸ್ತಾವನೆ ಆರು ತಿಂಗಳ ಹಿಂದೆಯೇ ಬಂದಿತ್ತು. ಕೆಎಂಎಫ್ ಉತ್ಪಾದನೆ ಮೇಲೆ ಯಾವುದೇ ನಿಯಂತ್ರಣ ಇಲ್ಲದೆ ಬ್ರಾಂಡ್ ಬಳಕೆಗೆ ಅವಕಾಶ ಕಲ್ಪಿಸಿದರೆ ಸಮಸ್ಯೆ ಎದುರಾಗುವ ಅಪಾಯವಿತ್ತು. ದೋಸೆ ಹಿಟ್ಟು ಮಾರಾಟಕ್ಕೆ ಅನುಮತಿ ಕೊಟ್ಟಿದ್ದರೆ ವಾರ್ಷಿಕ 6 ರಿಂದ 10 ಲಕ್ಷದಷ್ಟು ಲಾಭ ಆಗುತ್ತಿತ್ತು. ಇಷ್ಟು ಹಣಕ್ಕಾಗಿ ನಂದಿನಿ ಬ್ರಾಂಡ್‌ಗೆ ಧಕ್ಕೆಯಾಗುವಂತೆ ನಿರ್ಧಾರ ಕೈಗೊಳ್ಳಬಾರದೆಂದು ಅನುಮತಿ ನೀಡಿರಲಿಲ್ಲ ಎಂದು ತಿಳಿಸಿದರು.

ತಿರುಪತಿ ತಿರುಮಲ ದೇವಸ್ಥಾನ ಟ್ರಸ್ಟ್‌ಗೆ ಲಾಡು ಉತ್ಪಾದನೆಗೆ ಪೂರೈಕೆಯಾದ ತುಪ್ಪ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ಎಚ್ಚೆತ್ತುಕೊಂಡು ಸ್ವಂತ ದೋಸೆ ಹಿಟ್ಟು ಉತ್ಪಾದಿಸುವ ಘಟಕ ಸ್ಥಾಪಿಸಿ ನಮ್ಮ ಸಿಬ್ಬಂದಿಯಿಂದಲೇ ಉತ್ಪಾದಿಸಿ ಮಾರು ಕಟ್ಟೆಗೆ ಪೂರೈಸುವ ಪ್ರಸ್ತಾವ ಮಂಡಿಸಲು ಸೂಚಿಸಿದ್ದು, ಈಗ ಟೆಂಡರ್ ಕೂಡ ಮುಕ್ತಾ ಯವಾಗಿದೆ. ಮುಖ್ಯಮಂತ್ರಿಯವರ ಅನುಮತಿ ಪಡೆದು ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದ್ದೇವೆ ಎಂದು ಹೇಳಿದರು.

ಈ‌ ಮಧ್ಯೆ, ನಂದಿನಿ ಬ್ರ್ಯಾಂಡ್ ದೋಸೆ ಹಿಟ್ಟಿಗೆ ಅಡ್ಡಗಾಲು ಹಾಕಿರುವ ಕಳೆದರಡು ದಶಕಗಳಿಂದ ದೋಸೆ, ಇಡ್ಲಿ ಹಿಟ್ಟು ಮಾರಾಟದಲ್ಲಿ ಪಾರುಪತ್ಯ ಮೆರೆದಿರುವ ಐಡಿ ಕಂಪನಿ ಉತ್ಪನ್ನಗಳನ್ನು ಖರೀದಿಸದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಪರ ಸಂಘಟನೆಗಳು ‘ಬಾಯ್ಕಟ್ ಐಡಿಪ್ರಾಡೆಕ್ಟ್’ ಅಭಿಯಾನ ಆರಂಭಿಸಿದ್ದು ಲಕ್ಷಾಂತರ ಮಂದಿ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ.

Award to KSRTC 10ನೇ ಬಾರಿಗೆ ರೋಲಿಂಗ್ ಶೀಲ್ಡ್ ಪ್ರಶಸ್ತಿ ಪಡೆದ KSRTC

Danger from paper cups ಪೇಪರ್ ಲೋಟದಲ್ಲಿ ಕಾಫಿ, ಟೀ ಕುಡಿಯುತ್ತಿದ್ದೀರಾ? ಹುಷಾರು, ನಿಮ್ಮ ಜೀವಕ್ಕೇ ಕಂಟಕವಾದೀತು!

Actor Naga Chatanya ನನಗಿಬ್ಬರು ಮಕ್ಕಳು ಬೇಕು… ನಾಗ ಚೈತನ್ಯ ಫ್ಯಾಮಿಲಿ ಪ್ಲ್ಯಾನಿಂಗ್ ಮಾತು ವೈರಲ್, ವಿಡಿಯೋ ನೋಡಿ

TAGGED:Nandini brand idly dosa batter will be available by the end of December
Share This Article
Facebook Twitter Copy Link Print
Previous Article Daily Prediction ದಿನ ಭವಿಷ್ಯ… 08-12-2024, ಭಾನುವಾರ, ಧನುಸ್ಸು: ವ್ಯವಹಾರದಲ್ಲಿ ಜಾಗರೂಕರಾಗಿರಿ,‌ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?
Next Article Mandya Sahitya Sammelan ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ‌ ವಿವಾದ: ಮಾಂಸಾಹಾರಿಗಳ ಆಕ್ರೋಶ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?