Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > High court approves divorce ಪತಿ‌ ಮೇಲೆ ಮುನಿಸು: ಏಳು ವರ್ಷಗಳಿಂದ ಫಸ್ಟ್‌ ನೈಟ್‌ಗೆ ಒಪ್ಪದ ಮಹಿಳೆಗೆ ಹೈಕೋರ್ಟ್ ವಿಚ್ಛೇದನ
ಕರ್ನಾಟಕಪ್ರಮುಖ

High court approves divorce ಪತಿ‌ ಮೇಲೆ ಮುನಿಸು: ಏಳು ವರ್ಷಗಳಿಂದ ಫಸ್ಟ್‌ ನೈಟ್‌ಗೆ ಒಪ್ಪದ ಮಹಿಳೆಗೆ ಹೈಕೋರ್ಟ್ ವಿಚ್ಛೇದನ

Share
2 Min Read
SHARE

newsics.com

ಬೆಂಗಳೂರು: ಗಂಡನ ಮೇಲೆ ಮುನಿಸಿಕೊಂಡು ಮದುವೆಯಾಗಿ ಏಳು ವರ್ಷ ಕಳೆದರೂ ಫಸ್ಟ್‌ ನೈಟ್‌ಗೆ ಒಪ್ಪದ ಮಹಿಳೆಗೆ ಹೈಕೋರ್ಟ್‌ ವಿಚ್ಛೇದನ ಮಂಜೂರಾತಿ ನೀಡಿದೆ.

ತನ್ನ ಅಂತಸ್ತಿಗೆ ತಕ್ಕಂತೆ ಆರತಕ್ಷತೆ ಮಾಡದ ಹಿನ್ನೆಲೆಯಲ್ಲಿ ವೈವಾಹಿಕ ಜೀವನ ನಡೆಸಲು ಆಸಕ್ತಿ ತೋರದ ಮಹಿಳೆಗೆ ಗಂಡನೊಂದಿಗೆ ವಿಚ್ಛೇದನ ಮಂಜೂರು ಮಾಡಿದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.

ವಿನಾಕಾರಣ ದೂಷಿಸುತ್ತಾ ಬೆಡ್‌ ರೂಂನಲ್ಲಿ ಪತಿ ಮೇಲೆ ಹಲ್ಲೆ ನಡೆಸಿದ ಮತ್ತು ಬೇರೊಂದು ವರನನ್ನು ಹುಡುಕಿ ವಿವಾಹವಾಗಲು ವಿಚ್ಛೇದನ ನೀಡುವಂತೆ 127 ಪುಟಗಳ ವಾಟ್ಸ್ಯಾಪ್‌ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಪತ್ನಿಯ ವರ್ತನೆಯನ್ನು ಪರಿಗಣಿಸಿದ ಹೈಕೋರ್ಟ್‌ ವಿಚ್ಛೇದನ ಮಂಜೂರಾತಿ ಕಾಯಂಗೊಳಿಸಿದೆ.

ರವಿ ಎಂಬುವರು ಪೋಷಕರ ನಿಶ್ಚಯಿಸಿದ ಮಹಿಳೆ ಜತೆ 2017ರ ಸೆ.27ರಂದು ಮದುವೆಯಾಗಿದ್ದರು. ಆದರೆ, ವಿವಾಹ ಅನೂರ್ಜಿತಗೊಳಿಸಿ ವಿಚ್ಛೇದನ ಮಂಜೂರು ಮಾಡುವಂತೆ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ 2019ರಲ್ಲಿ ರವಿ ಅರ್ಜಿ ಸಲ್ಲಿಸಿದ್ದರು. ಮದುವೆ ನಂತರ ನನ್ನ ಮನೆಗೆ ಬಂದ ಪತ್ನಿ, ತನ್ನ ಅಂತಸ್ತು ಹಾಗೂ ಕನಸಿಗೆ ತಕ್ಕಂತೆ ಅದ್ಧೂರಿಯಾಗಿ ಆರತಕ್ಷತೆ ಮಾಡಿಲ್ಲ ಎಂದು ಆಕ್ಷೇಪಿಸಿ ಮೊದಲ ರಾತ್ರಿಗೆ ಒಪ್ಪಿರಲಿಲ್ಲ. ನಂತರ ಒಂದಲ್ಲ ಒಂದು ಕಾರಣ ನೀಡಿ ಮೊದಲ ರಾತ್ರಿಯನ್ನು ಮುಂದೂಡುತ್ತಲೇ ಬಂದರು. ಜತೆಗೆ ಹಲವು ಕಾರಣ ನೀಡಿ ನನ್ನನ್ನು ನಿಂದಿಸುತ್ತಿದ್ದರು. ಕೆಲ ಸಂದರ್ಭದಲ್ಲಂತೂ ಬೆಡ್‌ ರೂಂನಲ್ಲಿ ನನ್ನ ಮೇಲೆ ಹಲ್ಲೆ ಸಹ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ನೀನು ಕಡಿಮೆ ವೇತನ ಪಡೆಯುತ್ತಿದ್ದು, ತನ್ನ ಕನಸುಗಳನ್ನು ಈಡೇರಿಸಲು ಹಣ ಖರ್ಚು ಮಾಡುವ ಪರಿಸ್ಥಿತಿಯಲ್ಲಿ ನೀನು ಇಲ್ಲ. ಹೀಗಾಗಿ, ತವರು ಮನೆಗೆ ಕಳುಹಿಸುವಂತೆ ಪತ್ನಿ ನನಗೆ ಒತ್ತಾಯಿಸುತ್ತಿದ್ದರು. ಮದುವೆ ಆದ ಕೆಲ ತಿಂಗಳ ನಂತರ ಅಪಘಾತದಿಂದ ಪತ್ನಿಯ ತಂದೆ ಸಾವನ್ನಪ್ಪಿದ್ದರೆ, ಅದಕ್ಕೂ ನಾನೇ ಕಾರಣ ಎಂದು ದೂಷಿಸಿದರು. ಈ ಎಲ್ಲಾ ಸಂಗತಿ ಪರಿಗಣಿಸಿ ವಿಚ್ಛೇದನ ಮಂಜೂರು ಮಾಡಬೇಕು ಎಂದು ರವಿ ಕೋರಿದ್ದರು. ಇವರ ಅರ್ಜಿ ಪುರಸ್ಕರಿಸಿ ವಿಚ್ಛೇದನ ಮಂಜೂರು ಮಾಡಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯವು 2022ರ ಜ.30ರಂದು ಆದೇಶಿಸಿತ್ತು.

ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದ ಪತ್ನಿ, ಪತಿಯನ್ನು ನಾನು ಪ್ರೀತಿಸುತ್ತಿದ್ದೇನೆ. ವೈವಾಹಿಕ ಜೀವನ ಮುಂದುವರಿಸಲು ಬಯಸುತ್ತಿದ್ದೇನೆ. ಹಾಗಾಗಿ, ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು. ಈ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

ಕಿರುಕುಳ ನೀಡಲೆಂದೇ ಪತ್ನಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂಬ ಪತಿಯ ವಾದವೂ ಸತ್ಯವಾಗಿರುವ ಸಾಧ್ಯತೆಯಿದೆ. ಆದ್ದರಿಂದ ಕೌಟುಂಬಿಕ ನ್ಯಾಯಾಲಯವು ವಿವಾಹ ವಿಚ್ಛೇದನ ಮಂಜೂರಾತಿಯನ್ನು ಕಾಯಂಗೊಳಿಸಲಾಗುತ್ತಿದೆ ಎಂದು ಹೈಕೋರ್ಟ್‌ ಆದೇಶಿಸಿದೆ.

PM MODI ಮಹಿಳೆಯರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್

borewell 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 5 ವರ್ಷದ ಬಾಲಕ

Heart attack 26 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಹೃದಯಾಘಾತದಿಂದ ಸಾವು, ಯಾಕೆ ಹೀಗಾಯ್ತು?

TAGGED:High court divorce to woman who did not agree to first night for seven years
Share This Article
Facebook Twitter Copy Link Print
Previous Article PM MODI ಮಹಿಳೆಯರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್
Next Article ನಟ ದರ್ಶನ್ ಮಧ್ಯಂತರ ಜಾಮೀನು‌ ಅವಧಿ ವಿಸ್ತರಣೆ: ಡಿ‌.11ಕ್ಕೆ ಶಸ್ತ್ರಚಿಕಿತ್ಸೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?