newsics.com
ಬೆಂಗಳೂರು: ಹಿರಿಯ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಸೋಮವಾರ ತಡರಾತ್ರಿ 2:30ರ ಹೊತ್ತಿಗೆ ನಿಧನರಾದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ಅವರು ಕೊನೆಯುಸಿರೆಳೆದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಲ್ಲದೆ ಕಳೆದ ಆರು ತಿಂಗಳಿಂದ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾಗಿದ್ದ ಅವರು 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಕೃಷ್ಣ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದರು.
ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ 2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು 1999 ರಿಂದ 2002 ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004 ರಿಂದ 2007 ರವರೆಗೆ ಮಹಾರಾಷ್ಟ್ರದ 19 ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ 1989ರಿಂದ ಜನವರಿ 1993 ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು. 1971 ರಿಂದ 2014 ರವರೆಗೆ ವಿವಿಧ ಸಮಯಗಳಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿದ್ದರು. ಇವರಿಗೆ 2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ.
Pawan Kalyan ಪವನ್ ಕಲ್ಯಾಣ್ ಗೆ ಜೀವ ಬೆದರಿಕೆ ಕರೆ; ಪೊಲೀಸರಿಂದ ತನಿಖೆ
Bus Accident ಬಸ್ ಬ್ರೇಕ್ ಫೇಲ್: ನಾಲ್ವರು ಪಾದಚಾರಿಗಳ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ
Heart attack 26 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಹೃದಯಾಘಾತದಿಂದ ಸಾವು, ಯಾಕೆ ಹೀಗಾಯ್ತು?