newsics.com
ಬೆಳಗಾವಿ: ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಬಳಸುತ್ತಾರೆ ಎನ್ನುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದ್ದಾರೆ.
ವಿಧಾನಪರಿಷತ್‌ನಲ್ಲಿ ಕೆ ಎ ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಾಗೂ ವಿರೋದ ಪಕ್ಷದ ಕೆಲ ಸದಸ್ಯರು ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದಲ್ಲಿ ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದೆ. ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ಭರವಸೆ ನೀಡಿದ ಸಚಿವರು ಇನ್ನಷ್ಟು ಸಮಯ ಪಡೆದು ಬಿಪಿಎಲ್ ಪಡಿತರದಾರರಿಗೆ ತೊಂದರೆಯಾಗದ ಹಾಗೆ ಎಪಿಎಲ್ ಕಾರ್ಡ್‌ಗೆ ಅರ್ಹ ಇರುವವರನ್ನು ಬಿಪಿಎಲ್‌ನಿಂದ ಬೇರ್ಪಡಿಸಲಾಗುವುದು ಎಂದು ತಿಳಿಸಿದರು.
ಈಗಿರುವ ಬಿಪಿಎಲ್ ಕಾರ್ಡ್ ಗಳಲ್ಲಿ ಶೇಕಡಾ 20 ರಷ್ಟು ಎಪಿಎಲ್ ಕಾರ್ಡದಾರರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು ಇದನ್ನು ಅತಿ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದರು. ಅರ್ಹ ಬಿಪಿಎಲ್ ಕಾರ್ಡಗಳು ಯಾವುದೇ ರೀತಿಯಲ್ಲಿ ರದ್ದಾಗದಂತೆ ಎಚ್ಚರ ವಹಿಸಲಾಗುವುದು. ಅರ್ಹರ ಬಿಪಿಎಲ್ ಕಾರ್ಡಗಳು ರದ್ದಾಗಿದ್ದರೆ ಅಂತಹವರಿಗೆ ಪುನಃ ಕಾರ್ಡ್ ದೊರಕಿಸಿಕೊಡಲಾಗುವುದು ಎಂದರು.
S M Krishna and Dr. Rajkumar ಮೇರುನಟ ಡಾ.ರಾಜ್‌ಕುಮಾರ್ ಅಪಹರಣವಾಗಿದ್ದಾಗ ನಿದ್ದೆ ಬಿಟ್ಟು ಒದ್ದಾಡಿದ್ದ ಕೃಷ್ಣ
S M Krishna ಬೆಂಗಳೂರಲ್ಲಿ ಎಸ್.ಎಂ. ಕೃಷ್ಣ ಅಂತಿಮ ದರ್ಶನ ಇಂದು, ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ
Child Sold ಗಂಡನ ಕಷ್ಟ ನೋಡಿ ಮಗು ಮಾರಿದ ತಾಯಿ! ಒಂದೂವರೆ ಲಕ್ಷ ರೂ.ಗಳಿಗೆ ಮಾರಾಟ, ನಾಲ್ವರ ಬಂಧನ
Bus Accident ಬಸ್ ಬ್ರೇಕ್ ಫೇಲ್: ನಾಲ್ವರು ಪಾದಚಾರಿಗಳ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ