Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಸಭ್ಯ ಚಿತ್ರ ಬಿಡಿಸಿ ಮಹಿಳೆಯ ಹೆಸರು ಬರೆದು ಮನೆ ಮುಂದೆ ಇಡುತ್ತಿದ್ದ ಕಾಮುಕನ ಬಂಧನ
ಕರ್ನಾಟಕ

ಅಸಭ್ಯ ಚಿತ್ರ ಬಿಡಿಸಿ ಮಹಿಳೆಯ ಹೆಸರು ಬರೆದು ಮನೆ ಮುಂದೆ ಇಡುತ್ತಿದ್ದ ಕಾಮುಕನ ಬಂಧನ

Share
1 Min Read
SHARE

newsics.com

ನಂಜನಗೂಡು: ಮಹಿಳೆಯರು, ಯುವತಿಯರ ಬಗ್ಗೆ ಅಸಭ್ಯವಾಗಿ ಲೈಂಗಿಕ ಚಿತ್ರಗಳನ್ನು ಬಿಡಿಸಿ ಹೆಸರುಗಳನ್ನು ನಮೂದಿಸಿ ಮನೆಗಳ ಮುಂದೆ ಇಡುತ್ತಿದ್ದ ಸೈಕೋಪಾತ್‌ನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹುಲ್ಲಹಳ್ಳಿಯ ವರದರಾಜಸ್ವಾಮಿ ಬಡಾವಣೆ ನಿವಾಸಿ ಶಿವಣ್ಣ(54) ಸಿಕ್ಕಿಬಿದ್ದ ವ್ಯಕ್ತಿ. ಸುಮಾರು ಮೂರ್ನಾಲ್ಕು ವರ್ಷಗಳಿಂದ ವರದರಾಜಸ್ವಾಮಿ ಬಡಾವಣೆ ಮಹಿಳೆಯರ ಬಗ್ಗೆ ಅಸಭ್ಯವಾಗಿ ಚಿತ್ರಗಳನ್ನು ಬಿಳಿ ಹಾಳೆಯಲ್ಲಿ ಬರೆದು ಹೆಸರುಗಳನ್ನು ಉಲ್ಲೇಖಿಸಿ ಅವರ ಮನೆಗಳ ಮುಂದೆ ಇಡುತ್ತಿದ್ದ.

ಇದರಿಂದಾಗಿ ಗ್ರಾಮದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸಿದ್ದವು. ಕೆಲವು ಮದುವೆ ಸಂಬಂಧಗಳೂ ಮುರಿದು ಬಿದ್ದಿದ್ದವು. ಮನೆಗಳ ಮುಂದೆ ಕಾಣಿಸಿಕೊಳ್ಳುತ್ತಿದ್ದ ಅಸಭ್ಯ ಚಿತ್ರಗಳುಳ್ಳ ಚೀಟಿಗಳು ಗ್ರಾಮವನ್ನೇ ಬೆಚ್ಚಿ ಬೀಳಿಸಿತ್ತು.

ಆ ವ್ಯಕ್ತಿಯನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಗ್ರಾಮಸ್ಥರು ಹಲವಾರು ದಿನಗಳಿಂದ ಹೊಂಚು ಹಾಕುತ್ತಿದ್ದರು. ನಿನ್ನೆ ತಡರಾತ್ರಿ ಸೈಕಲ್‌ನಲ್ಲಿ ಬಂದ ಶಿವಣ್ಣ ಮನೆ ಮುಂದೆ ಚೀಟಿಯನ್ನು ಇಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ. ಧರ್ಮದೇಟು ಕೊಟ್ಟ ಗ್ರಾಮಸ್ಥರು ಹುಲ್ಲಹಳ್ಳಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಇಂತಹ ಕಾಮುಕ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Panchmasali Protest ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ

SM KRISHNA: SM ಕೃಷ್ಣ ಅಂತ್ಯಸಂಸ್ಕಾರಕ್ಕೆ ಸಾವಿರ ಕೆ.ಜಿ ಗಂಧ ಬಳಕೆ- ಕಾರಣ..?

Bigg Boss Kannada ಪಾತ್ರೆ ತೊಳೆದ್ರೆ ನಾನು ಗಂಡಸೇ ಅಲ್ಲ: ರಜತ್ ರಂಪಾಟ

B.S Yediurappa ಯಡಿಯೂರಪ್ಪಗೆ ಮತ್ತೆ ರಿಲೀಫ್: ಡಿ.12ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ

TAGGED:Arrest of a lover who drew an obscene picture and kept it in front of the house after writing the woman's name
Share This Article
Facebook Twitter Copy Link Print
Previous Article Bigg Boss Kannada ಮಂಜು, ಮೋಕ್ಷಿತಾ ಹಾಗೂ ಗೌತಮಿ ಮಧ್ಯೆ ಏನಾಗ್ತಿದೆ?
Next Article ಪ್ರವಾಸಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ಮುರ್ಡೇಶ್ವರದಲ್ಲಿ ಸಮುದ್ರಪಾಲು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?