newsics.com
ಬೆಳಗಾವಿ : ನಿನ್ನೆ ಬೆಳಗಾವಿಯ ವಿಕಾಸ ಸೌಧದಲ್ಲಿ ಒಂದೆಡೆ ಅಧಿವೇಶನ ನಡೆಯುತ್ತಿದ್ದರೆ, ಇನ್ನೊಂದು ಕಡೆ 2A ಮೀಸಲಾತಿಗೆ ಸಂಬಂಧ ಪಟ್ಟಂತೆ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದರು. ಈ ವೇಳೆ ಈ ಒಂದು ಹೋರಾಟದಲ್ಲಿ ಪ್ರತಿಭಟನಾಕಾರರು ಹಿಂಸಾತ್ಮಕ ಪ್ರತಿಭಟನೆ ನಡೆಸಿ ಪೊಲೀಸರ ವಾಹನಗಳ ಮೇಲೆ ಹಾಗೂ ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿದ್ದರು.
ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಐವರ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.
ಹೌದು ಬೆಳಗಾವಿಯಲ್ಲಿ 2ಎ ಮೀಸಲಾತಿ ಆಗ್ರಹಿಸಿ ನಡೆದ ಲಿಂಗಾಯತ ಪಂಚಮಸಾಲಿ ಸಮುದಾಯದ ಹೋರಾಟದ ವೇಳೆ ನಡೆದ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯವಾಗಿತ್ತು. ಹಾಗೇ ಏಳು ಸರ್ಕಾರಿ ಬಸ್, ಮೂರು ಪೊಲೀಸ್ ವಾಹನ ಜಖಂಗೊಂಡ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಮತ್ತು ಪೊಲೀಸ್ ವಾಹನಗಳು ಜಖಂಗೊಂಡಿದ್ದವು. ಕಲ್ಲು ತೂರಿದವರ ಮೇಲೆ ಇದೀಗ ಪೊಲೀಸರು FIR ದಾಖಲಿಸಿದ್ದಾರೆ.