newsics.com
ಬೆಂಗಳೂರು : ಹೊಸ ವರ್ಷಕ್ಕೆ ಸರ್ಕಾರ ನಂದಿನಿ ಹಾಲಿನ ದರ ಏರಿಕೆ ಮಾಡಲು ಸದ್ಯ ಸರ್ಕಾರ ಚಿಂತನೆ ನಡೆಸಿದೆ.
ನಂದಿನಿ ಹಾಲು ಪ್ರತಿ ಲೀಟರ್ಗೆ ಬರೋಬ್ಬರಿ 5 ರೂಪಾಯಿ ಏರಿಕೆ ಮಾಡಲು ಚಿಂತನೆ ನಡೆಸುತ್ತಿದೆ. ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಇಂತಹದೊಂದು ಪ್ರಸ್ತಾವನೆ ರಾಜ್ಯ ಸರ್ಕಾರಕ್ಕೆ ಬಂದಿದ್ದು. ಚಳಿಗಾಲದ ಅಧಿವೇಶನದ ಬಳಿಕ ದರ ಏರಿಕೆ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ.
ಕೆಎಂಎಫ್ ಅಧಿಕಾರಿಗಳ ಜೊತೆ ಸಿಎಂ ಡಿಸೆಂಬರ್ 21 ಅಥವಾ 22 ರಂದು ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಹಾಲಿನ ದರ ಏರಿಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ.