newsics.com
ಚಿಕ್ಕಮಗಳೂರು (ಮುಂಡುಗಾರು): ನಕ್ಸಲ್ ಪೀಡಿತ ಪ್ರದೇಶವೆಂದು ಗುರುತಿಸಲ್ಪಟ್ಟಿರುವ ಮುಂಡುಗಾರು ಮತ್ತು ಆಸುಪಾಸಿನ ಹಳ್ಳಿಗಳಿಗೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಭೇಟಿ ನೀಡಿದರು.
ಪೇಜಾವರ ಶ್ರೀಗಳು ಶನಿವಾರ ಮುಂಡುಗಾರಿಗೆ ಭೇಟಿ ನೀಡಿದಾಗ ಅಲ್ಲಿನ ಗ್ರಾಮಸ್ಥರು ಭಕ್ತಿಯಿಂದ ಬರಮಾಡಿಕೊಂಡರು. ಮೈಲುದೂರ ನೂರಾರು ಮಹಿಳೆಯರು, ಪುರುಷರು ರಾಮಮಂತ್ರ ಘೋಷ ಭಜನೆಗಳೊಂದಿಗೆ ಪೂರ್ಣ ಕುಂಭಗಳ ಸಹಿತ ಶ್ರೀಗಳವರನ್ನು ಕಾಲ್ನಡಿಗೆಯಲ್ಲಿ ವನಮೆರವಣಿಗೆ ನಡೆಸಿದರು.
ಗಿರಿಜನ ಜಾಗೃತಿ ಕಾರ್ಯಕ್ರಮದಲ್ಲಿ ಕೆಲ ಹೊತ್ತು ಸಂಘಟನೆಗಳು ಹಾಗೂ ಗ್ರಾಮಸ್ಥರೊಂದಿಗೆ ಆಪ್ತ ಸಮಾಲೋಚನೆ ನಡೆಸಿ ಕುಂದುಕೊರತೆಗಳ ಬಗ್ಗೆ ಆಲಿಸಿದರು. ಗ್ರಾಮಸ್ಥರ ಲಿಖಿತ ಅಹವಾಲು ಸ್ವೀಕರಿಸಿದ ಶ್ರೀಗಳು ಶ್ರೀಮಠದಿಂದ ಮತ್ತು ಭಕ್ತರ ನೆರವಿನೊಂದಿಗೆ ಸಹಕರಿಸುವುದರ ಜತೆಗೆ ಕೆಲವು ವಿಚಾರಗಳನ್ನು ಸರಕಾರದ ಗಮನಕ್ಕೆ ತರಲಾಗುವುದು ಎಂದರು.
ಸುಮಾರು ಹತ್ತು ವರ್ಷಗಳ ಹಿಂದೆಯೂ ಪೇಜಾವರ ಮಠದ ಹಿರಿಯ ಗುರುಗಳಾದ ಶ್ರೀವಿಶ್ವೇಶತೀರ್ಥ ಶ್ರೀಪಾದರು ಕಾಡಿನಲ್ಲೇ ಪಟ್ಟದ ದೇವರ ಪೂಜೆ ನೆರವೇರಿಸಿ ಅನೇಕ ಸೌಲಭ್ಯ, ಸವಲತ್ತುಗಳ ಶ್ರೀಮಠದಿಂದ ಒದಗಿಸಿರುವುದನ್ನು ಗ್ರಾಮದ ಪ್ರಮುಖರು ಸ್ಮರಿಸಿಕೊಂಡರು. ಗಿರಿಜನ ಬಂಧುಗಳ ನೆಮ್ಮದಿಯ ಬದುಕಿಗೆ ಸದಾ ಸ್ಪಂದಿಸಲಿದೆ. ಮಕ್ಕಳಿಗೆ ಸಾಧ್ಯವಾದಷ್ಟು ಉತ್ತಮ ಶಿಕ್ಷಣ, ಸಂಸ್ಕಾರಗಳನ್ನು ನೀಡಿ ಬೆಳೆಸುವಂತೆಯೂ ಶ್ರೀಗಳು ಕಿವಿಮಾತು ಹೇಳಿ ಎಲ್ಲರಿಗೂ ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
Warning to Seer ನಮ್ಮ ತಂಟೆಗೆ ಬಂದರೆ ಕೈ ಕತ್ತರಿಸುತ್ತೇವೆ: ಪಂಚಮಸಾಲಿ ಶ್ರೀಗಳಿಗೆ ಎಚ್ಚರಿಕೆ
Women like being alone ರೊಮ್ಯಾನ್ಸ್ ಟೈಮ್… ಒಂಟಿತನದಲ್ಲೇ ಮಹಿಳೆಯರು ಪುರುಷರಿಗಿಂತ ಹೆಚ್ಚು ತೃಪ್ತಿ ಕಾಣುತ್ತಾರಂತೆ!