newsics.com
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ನನ್ನು ಬಂಧಿಸಿ ತನಿಖೆ ಮುಂದುವರಿಸಿರುವ ಪೊಲೀಸರು ಇದೀಗ ಡ್ರೋನ್ ಪ್ರತಾಪ್‌ನ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ.
ಕ್ಯಾಮರಾಮನ್ ವಿನಯ್ ಹಾಗೂ ಸೋಡಿಯಂ ಕೊಡಿಸಿದ್ದ ಪ್ರಜ್ವಲ್ ಇಬ್ಬರನ್ನು ತುಮಕೂರಿನ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ.
ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿಸಿದ್ದ. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು ಶನಿವಾರ ತಡರಾತ್ರಿ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.
ಇನ್ನೋರ್ವ ಆರೋಪಿ ಫಾರ್ಮ್ ಹೌಸ್ ಮಾಲೀಕ ಜಿತೇಂದ್ರ ಜೈನ್ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಈಗಾಗಲೇ ಡ್ರೋನ್ ಪ್ರತಾಪ್‌ನನ್ನು ಮಧುಗಿರಿ ನ್ಯಾಯಾಲಯ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.
Entertainment ಕೊರೆವ ಚಳಿಯಲ್ಲೂ ಜ್ಯೋತಿ ಪೂರ್ವಜ್ ಸ್ವಿಮ್ಮಿಂಗ್‌ನಲ್ಲಿ ಬ್ಯುಸಿ, ಹೆಚ್ಚಿತು ಹುಡುಗರ ಮೈ ಬಿಸಿ!
ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಸ್ಥಿ ವಿಸರ್ಜನೆ
Maggie price hike ಜನವರಿಯಿಂದ ಮ್ಯಾಗಿ ದುಬಾರಿ ಸಾಧ್ಯತೆ, ಯಾಕೆ ದರ ಹೆಚ್ಚಳ?