newsics.com
ಶಿವಮೊಗ್ಗ : ಮಂಗಳೂರಿಂದ ಸಾಗರ ತಾಲೂಕಿನ ದೇವಸ್ಥಾನಗಳಿಗೆ ಪ್ರವಾಸಕ್ಕೆ ಬಂದಿದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ತಿರುವಿನಲ್ಲಿ ಪಲ್ಟಿಯಾಗಿದೆ.
21ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಅರಳಗೊಡು ಸಮೀಪದ ಮುಪ್ಪನೆ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬಸ್ನಲ್ಲಿದ್ದ 60 ಜನರು ಪೈಕಿ 21 ಜನರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಗರದ ಜೋಗ ಜಲಪಾತ ವೀಕ್ಷಣೆ ಮಾಡಿಕೊಂಡು ತಾಲೂಕಿನಲ್ಲಿ ಇರುವ ಬಲೆ ಪದ್ಮಾವತಿ ದೇವಸ್ಥಾನ ವೀಕ್ಷಣೆ ಮಾಡಲು ಹೋಗುತ್ತಿರುವ ಸಂದರ್ಭದಲ್ಲಿ ಅರಳಗೊಡು ಸಮೀಪ ಬಸ್ ಅಪಘಾತ ಸಂಭವಿಸಿದೆ.