newsics.com
ರಾಜಸ್ಥಾನ: ನಿಶ್ಚಿತಾರ್ಥ ಮಾಡಿಕೊಂಡ ಜೋಡಿಯೊಂದು ಮದುವೆಗೂ ಮುನ್ನವೇ ಮೊದಲ ರಾತ್ರಿಯ ಸುಖವನ್ನು ಅನುಭವಿಸಿದೆ. ನಂತರ, ಹುಡುಗ ತನಗೆ ಈ ಹುಡುಗಿಯೊಂದಿಗೆ ಮದುವೆ ಬೇಡ ಎಂದು ನಿರಾಕರಿಸಿದ್ದಾನೆ. ಇದರಿಂದ ನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ರಾಜಸ್ಥಾನದ ಝುನ್ಝುನು ಜಿಲ್ಲೆಯಲ್ಲಿ ನಿಶ್ಚಿತಾರ್ಥದ ನಂತರ ಮದುವೆಯಾಗಲು ನಿರಾಕರಿಸಿದ್ದರಿಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿಶ್ಚಿತಾರ್ಥದ ನಂತರ ಯುವಕ ಯುವತಿಗೆ ಮೋಸ ಮಾಡಿ ಮದುವೆಯಾಗಲು ನಿರಾಕರಿಸಿದ್ದರಿಂದ ಮನನೊಂದು ಯುವತಿ ಈ ಮಾರಕ ಕ್ರಮ ಕೈಗೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಝುನ್ಝುನು ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಅಧಿಕಾರಿ ಅಶೋಕ್ ಚೌಧರಿ ಘಟನೆಯ ವಿವರ ನೀಡಿದ್ದು, ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶನಿವಾರ ಯುವತಿ ಬಹಳ ಹೊತ್ತು ಕೋಣೆಯ ಬಾಗಿಲು ತೆರೆಯದಿದ್ದಾಗ ಕರೆದರೂ ಪ್ರತಿಕ್ರಿಯೆ ಬರಲಿಲ್ಲ. ಕಿಟಕಿಯಿಂದ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
ಯುವತಿಯ ಚಿಕ್ಕಪ್ಪ ಪೊಲೀಸರಿಗೆ ತಿಳಿಸಿದಂತೆ, ಒಂದೂವರೆ ತಿಂಗಳ ಹಿಂದೆ ಆಕೆಯ ನಿಶ್ಚಿತಾರ್ಥ ಗುಡಗೌಡ್ಜಿ ನಿವಾಸಿ ಯುವಕನೊಂದಿಗೆ ನಡೆದಿತ್ತು. ನಿಶ್ಚಿತಾರ್ಥದ ನಂತರ ಯುವಕ ಸಂಬಂಧದ ಲಾಭ ಪಡೆದು ಯುವತಿಯನ್ನು ಮೋಸಗೊಳಿಸಿ ದೈಹಿಕ ಸಂಬಂಧ ಹೊಂದಿದ್ದ. ನಂತರ ಯುವಕ ಮದುವೆಯಾಗಲು ನಿರಾಕರಿಸಿದ್ದ. ಈ ಮೋಸ ಮತ್ತು ಅವಮಾನದಿಂದ ಯುವತಿ ತೀವ್ರವಾಗಿ ಮನನೊಂದು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು. ಕೊನೆಗೆ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ.
ಕುಟುಂಬಸ್ಥರ ದೂರಿನ ಮೇರೆಗೆ ನಿನ್ನೆ ರಾತ್ರಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Soonu sood: ವೃದ್ಧಾಶ್ರಮಕ್ಕೆ ಹೊಸ ಸಿನಿಮಾದ ಕಲೆಕ್ಷನ್ ಹಣ ನೀಡಲಿರುವ ಸೋನು ಸೂದ್
Namma Bengaluru Challenge: ಬೆಂಗಳೂರಿನ ಸಮಸ್ಯೆ ಪರಿಹಾರಕ್ಕೆ ಐಡಿಯಾ ನೀಡಿದ ಐವರಿಗೆ ಸಿಕ್ತು 10 ಲಕ್ಷ ರೂ.
Relationship :ನಿಮ್ಮ ಹೆಂಡತಿಯ ಮನಸ್ಸನ್ನು ಹೇಗೆ ಅರ್ಥಮಾಡಿಕೊಳ್ಳಬೇಕು ಎಂದು ನಿಮಗೆ ತಿಳಿದಿದೆಯೇ?