Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Supreme court ಮಸೀದಿಯೊಳಗೆ ಜೈ ಶ್ರೀರಾಂ ಕೂಗೋದು ಕ್ರಿಮಿನಲ್ ಅಪರಾಧವಾ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ
ಕರ್ನಾಟಕದೇಶಪ್ರಮುಖ

Supreme court ಮಸೀದಿಯೊಳಗೆ ಜೈ ಶ್ರೀರಾಂ ಕೂಗೋದು ಕ್ರಿಮಿನಲ್ ಅಪರಾಧವಾ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

Share
2 Min Read
SHARE

newsics.com

ನವದೆಹಲಿ: ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೂಗುವುದು ಕ್ರಿಮಿನಲ್ ಅಪರಾಧ ಹೇಗೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಪೊಲೀಸರನ್ನು ಪ್ರಶ್ನಿಸಿದೆ.

ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಎಂದು ಕೂಗಿದ ಆರೋಪದ ಮೇಲೆ ಇಬ್ಬರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಕೂಗುವುದು ಹೇಗೆ ಅಪರಾಧ? ಈ ಬಗ್ಗೆ ನಿಮ್ಮ ನಿಲುವು ತಿಳಿಸಿ ಎಂದು ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ಮಸೀದಿ ಆವರಣದಲ್ಲಿ ಜೈ ಶ್ರೀರಾಂ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗುವುದಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಹೈದರ್ ಅಲಿ ಸಿ ಎಂ ಅವರು ಸುಪ್ರೀಂ ಕೋರ್ಟ್ ಮೇಲ್ಮನವಿ ಸಲ್ಲಿಸಿದ್ದಾರೆ.

ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಮಸೀದಿಯೊಳಗೆ ಬಂದು ಘೋಷಣೆ ಕೂಗಿದ ವ್ಯಕ್ತಿಗಳನ್ನು ಹೇಗೆ ಗುರುತಿಸಲಾಯಿತು ಎಂದು ದೂರುದಾರರನ್ನು ಪ್ರಶ್ನಿಸಿದೆ.

ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೆ ಪುರಾವೆಗಳನ್ನು ಪರಿಶೀಲಿಸಲಾಗಿದೆಯೇ ಎಂದು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್‌ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಪ್ರಶ್ನಿಸಿತು.

ಅಂತಿಮವಾಗಿ ದೂರುದಾರರು ಸಲ್ಲಿಸಿದ ಮೇಲ್ಮನವಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ನೀಡುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್ ಪ್ರಕರಣದ ಮುಂದಿನ ವಿಚಾರಣೆಯನ್ನು 2025ರ ಜನವರಿಯಲ್ಲಿ ನಡೆಸುವುದಾಗಿ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಐತ್ತೂರು ಗ್ರಾಮದ ಕಡಬ- ಮರ್ದಾಳ ರಸ್ತೆಯಲ್ಲಿರುವ ಬದ್ರಿಯಾ ಜುಮ್ಮಾ ಮಸೀದಿ ಆವರಣಕ್ಕೆ ನುಗ್ಗಿದ್ದ ಕೀರ್ತನ್ ಕುಮಾರ್ ಮತ್ತು ಸಚಿನ್ ಕುಮಾರ್ ʼಜೈ ಶ್ರೀ ರಾಮ್ʼ ಎಂದು ಕೂಗಿದ್ದರು ಹಾಗೂ ಬ್ಯಾರಿಗಳನ್ನು (ಮುಸ್ಲಿಮರು) ಶಾಂತಿಯಿಂದ ಬದುಕಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದರು ಎಂಬುದಾಗಿ ಆರೋಪಿಸಲಾಗಿತ್ತು.

ಐಪಿಸಿ ಸೆಕ್ಷನ್‌ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದ ಕೃತ್ಯಗಳು), 447 (ಅತಿಕ್ರಮಣ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಆರೋಪಕ್ಕೆ ಸಂಬಂಧಿಸಿದಂತೆ ಈ ಇಬ್ಬರನ್ನು ಪೊಲೀಸರು ಬಂಧಿಸಿದ್ದರು. ತಮ್ಮ ವಿರುದ್ಧದ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಬಳಿಕ ಅವರಿಬ್ಬರೂ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ನಿರ್ದಿಷ್ಟ ಧಾರ್ಮಿಕ ನುಡಿಗಟ್ಟು ಅಥವಾ ಹೆಸರನ್ನು ಕೂಗುತ್ತಿದ್ದರು. ಅದು ಹೇಗೆ ಅಪರಾಧ? ಮಸೀದಿ ಆವರಣಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪಿಗಳ ಗುರುತು ಪತ್ತೆ ಹಚ್ಚಿದ್ದು ಹೇಗೆ? ಆರೋಪಿಗಳ ಗುರುತು ಖಾತ್ರಿಪಡಿಸಿಕೊಳ್ಳುವ ಮುನ್ನ ಸಿಸಿಟಿವಿ ಇಲ್ಲವೇ ಇನ್ನಾವುದೆ ಪುರಾವೆಗಳನ್ನು ಪರಿಶೀಲಿಸಲಾಗಿದೆಯೇ ಎಂದು ನ್ಯಾಯಪೀಠ ದೂರುದಾರರ ಪರ ವಕೀಲರನ್ನು ಪ್ರಶ್ನಿಸಿತು.

Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ

Priyanka Gandhi: ಸಂಸತ್‌ಗೆ ಪ್ಯಾಲೆಸ್ತೀನ್ ಬ್ಯಾಗ್‌ ಹಾಕಿಕೊಂಡು ಬಂದ ಪ್ರಿಯಾಂಕಾ ಗಾಂಧಿ

Crime ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

TAGGED:Is it a criminal offense to shout Jai Shri Ram inside a mosque? Supreme Court Question to Karnataka Police
Share This Article
Facebook Twitter Copy Link Print
Previous Article |Tulasi Gowda Passes away ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ
Next Article hardik pandya: ಅಮೆರಿಕನ್ ಮಾಡೆಲ್ ಕೈಲಿ ಜೆನ್ನರ್ ಜತೆ ಹಾರ್ದಿಕ್ ಪಾಂಡ್ಯ ಸೆಕೆಂಡ್ ಮ್ಯಾರೇಜ್

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?