newsics.com
ಬೆಂಗಳೂರು: ಮುಡಾ ಹಗರಣದ ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಈ ಬೆಳವಣಿಗೆಗಳ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ.
ಹೌದು, ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಗಳ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ.
ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎನ್ನಲಾಗಿದೆ.