newsics.com
ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಹಿರಿಯ ಆಟಗಾರ, ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾರತದ ಫೈನಲ್ ಹಾದಿಯನ್ನು ನಿರ್ಧರಿಸಲಿರುವ ಮಹತ್ವದ ಸರಣಿಯ ನಡುವೆಯೇ ಸ್ಟಾರ್ ಆಲ್‌ರೌಂಡರ್ ಆರ್ ಅಶ್ವಿನ್ ಅವರ ನಿರ್ಧಾರ ಅಚ್ಚರಿ ಮೂಡಿಸಿದೆ.
ಹೌದು, ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ.