newsics.com
ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ಎರಡು ದಿನಗಳ ಕಾಲ ಜಿಲ್ಲೆಯ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ ಡಿ.22ರವರೆಗೆ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಈ ಹಿನ್ನೆಲೆ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಡಿ.20 ಹಾಗೂ 21 ರಂದು ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ, ಆದೇಶಿಸಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಗಣ್ಯರು, ನೋಂದಾಯಿತ ಪ್ರತಿನಿಧಿಗಳು ಮಂಡ್ಯಕ್ಕೆ ಬರಲಿದ್ದಾರೆ. ಅವರಿಗೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.