newsics.com
ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಯನ್ನು ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆಯ ಮಧ್ಯೆ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಗಾಯಗೊಂಡ ನಂತರ ಸಂಸತ್ತಿನಲ್ಲಿ ಉದ್ವಿಗ್ನತೆ ಭುಗಿಲೆದ್ದಿತು.
ಸತ್ತಿನ ಹೊರಗೆ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಕೆಳಗೆ ಬಿದ್ದಿದ್ದಾರೆ. ಪ್ರತಿಭಟನೆಯ ವೇಳೆ ತಳ್ಳಲ್ಪಟ್ಟು ನಂತರ ಗಾಯಗೊಂಡರು. ತಳ್ಳಿದ ರಭಸಕ್ಕೆ ಸಾರಂಗಿ ಕಣ್ಣಿಗೆ ಪೆಟ್ಟು ಬಿದ್ದು ನೆಲಕ್ಕೆ ಬಿದ್ದಿದ್ದಾರೆ. ಕೂಡಲೇ ಸಾರಂಗಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯಗಳಾಗಿದ್ದು, ರಾಹುಲ್ ಗಾಂಧಿಯೇ ನನ್ನನ್ನು ತಳ್ಳಿದ್ದು ಎಂದು ಆರೋಪಿಸಿದ್ದಾರೆ.
ಬಿ.ಆರ್.ಅಂಬೇಡ್ಕರ್ ವಿಚಾರ ಕುರಿತು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಸಂಸತ್ತಿನ ಆವರಣದಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಗಾಯಗೊಂಡಿದ್ದಾರೆ.
ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತಳ್ಳಿದರು ಎಂದು ಸಾರಂಗಿ ಆರೋಪಿಸಿದ್ದಾರೆ.