newsics.com
ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಹೈಡ್ರಾಮಾದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಆರೋಪದಲ್ಲಿ
ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನ ಪೊಲೀಸರು ವಶಕ್ಕೆ ಪಡೆದ ಬಳಿಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನ ಪರಿಷತ್ ನಲ್ಲಿ ಬಳಸಿದ ಅವಾಚ್ಯ ಶಬ್ದದ ಹಿನ್ನೆಲೆಯಲ್ಲಿ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಸಚಿವೆ ಹೆಬ್ಬಾಳ್ಕರ್ ಅವರನ್ನು ನಮ್ಮ ಪ್ರತಿನಿಧಿ ಬೆಳಗಾವಿ ಸುವರ್ಣ ಸೌಧದಲ್ಲಿ ಸಂಪರ್ಕಿಸಿದಾಗ, ಮ್ಲಾನವದನದನರಾಗಿ ಕಂಡ ಅವರು, ಮನಸ್ಸಿಗೆ ಬಹಳ ನೋವಾಗಿದೆ, ಇವತ್ತು ಮಾತಾಡಲಾಗಲ್ಲ, ನಾಳೆ ಮಾತಾಡುವೆ ಎಂದು ಹೇಳಿದರು.