newsics.com
ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದದಿಂದ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ಬಂಧಿಸಲಾಗಿದೆ.
ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಮೇರೆಗೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ ಬಿಜೆಪಿ, ನಾಳೆ(ಡಿಸೆಂಬರ್ 20) ಕರ್ನಾಟಕದಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.
ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ನಡೆಸುವಂತೆ ಕರೆ ಕೊಡಲಾಗಿದೆ. ಇನ್ನು ಸಿಟಿ ರವಿ ಅವರ ತವರು ಜಿಲ್ಲೆ ಚಿಕ್ಕಮಗಳೂರು ನಗರ ಬಂದ್ಗೆ ಕರೆ ನೀಡಲಾಗಿದೆ.