newsics.com
ಬೆಳಗಾವಿ: ಬೆಳಗಾವಿಯ ಸದನದಲ್ಲಿ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿರುವ ಸಿ.ಟಿ. ರವಿ ಅವರನ್ನು ಬೆಳಗಾವಿಯ ಖಾನಾಪುರದ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ.
ಗುರುವಾರ ಮಧ್ಯರಾತ್ರಿ 12 ಗಂಟೆ ವೇಳೆಗೆವರವಿ ಅವರನ್ನು ಖಾನಾಪುರದ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಬಳಿಕ ಬೆಂಗಳೂರಿಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ. ಈ ವೇಳೆ ಠಾಣೆಯ ಗೇಟ್ ಬಡಿದು ಸಿ.ಟಿ. ರವಿ ಅವರ ತಲೆಗೆ ಗಾಯವಾಗಿದೆ. ಬಳಿಕ ಅವರನ್ನು ಖಾನಾಪುರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿದೆ. ಈ ವೇಳೆ ಪೊಲೀಸರ ನಡೆ ವಿರೋಧಿಸಿ ಆಸ್ಪತ್ರೆ ಮುಂಭಾಗವೇ ಸಿ.ಟಿ. ರವಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಮಾತನಾಡಿದ ಸಿ.ಟಿ ರವಿ ಅವರು, 35 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಪರಿಸ್ಥಿತಿ ನೋಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮದುರ್ಗದಲ್ಲಿ ಮಾತನಾಡಿದ ಅವರು, ಪೊಲೀಸರಿಗೆ ಮೇಲಿಂದ ಮೇಲೆ ಡೈರೆಕ್ಷನ್ಗಳು ಬರುತ್ತಿವೆ. ಪೊಲೀಸರು ಎಲ್ಲೆಲ್ಲೋ ಸುತ್ತಾಡಿಸುತ್ತಿದ್ದಾರೆ. ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದರು. ಮಾನಸಿಕ ಹಿಂಸೆ ಕೊಡಲು ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಿಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ.
ಅವರನ್ನು ಶುಕ್ರವಾರ ಬೆಂಗಳೂರಿಗೆ ಕರೆತರುವ ಸಾಧ್ಯತೆಯಿದೆ. ಸಿ.ಟಿ.ರವಿ ಅವರೂ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪ್ರತಿ ದೂರು ದಾಖಲಿಸಿದ್ದಾರೆ.