newsics.com
ಹೊನ್ನಾವರ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿದೆ. 34 ವಿಧ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಆರೋಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಶಿಕ್ಷಕರು-ವಿದ್ಯಾರ್ಥಿಗಳು ಸೇರಿ ಸುಮಾರು 34 ಮಂದಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ಕೋಲಾರ ಜಿಲ್ಲೆಯ, ಮಾಲೂರಿನ ಮಾಸ್ತಿ ಹಳ್ಳಿಯ ಕರ್ನಾಟಕ ಪ್ರೌಢ ಶಾಲೆಯ ವಿಧ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಜೊತೆ 40 ಜನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಿದ್ದರು.