newsics.com
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ತಾಳೇಕೆರೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಜನರು ಅಸುನೀಗಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾರಿನ ಮೇಲೆ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಅಲ್ಲೇ ಅಪ್ಪಚ್ಚಿಯಾಗಿದ್ದಾರೆ.
ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ.ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿರುವರ ರಕ್ಷಣೆ ಕಾರ್ಯ ನಡೆಯುತ್ತಿದೆ.
2 ಕಾರು, 2 ಲಾರಿ, ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿ ಕಾರಿನ ಮೇಲೆ ಕಂಟೇನರ್ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು, ಮಗು ಸೇರಿ ಒಟ್ಟು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವೋಲ್ವೋ ಕಂಪನಿಯ ಕಾರು ಇದಾಗಿದ್ದು, ಮೃತರನ್ನು 42 ವರ್ಷದ ಗೌರಾಬಾಯಿ, 12 ವರ್ಷದ ದೀಕ್ಷಾ, 16 ವರ್ಷದ ಧ್ಯಾನ್ ಮತ್ತು ಆರ್ಯ ಎಂದು ಗುರುತಿಸಲಾಗಿದ್ದು, ಇನ್ನುಳಿದವರ ಗುರುತು ಸಿಕ್ಕಿಲ್ಲ. ವಿಜಯಪುರ ಮೂಲದ ಇಂಜಿನಿಯರ್ ಕುಟುಂಬ ಎನ್ನುವ ಮಾಹಿತಿ ಸಿಕ್ಕಿದ್ದು, ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಬರುತ್ತಿದ್ದರು ಎನ್ನಲಾಗಿದೆ. ಎಲ್ಲರೂ ಒಂದೇ ಕುಟುಂಬದವರಾಗಿದ್ದು, ವೀಕೆಂಡ್ ಪ್ರವಾಸಕ್ಕೆ ಕುಟುಂಬ ಹೊರಟಿತ್ತು. ಆರು ತಿಂಗಳ ಹಿಂದೆಯಷ್ಟೇ ಕಾರು ಖರೀದಿ ಮಾಡಿದ್ದರು ಎನ್ನಲಾಗಿದೆ. KA 01 ND 1536 ಕಾರ್ ನಲ್ಲಿದ್ದ ಎಲ್ಲರೂ ಸಾವು ಕಂಡಿದ್ದಾರೆ.
Temples property ಹಿಂದೂ ದೇಗುಲಗಳ ಆಸ್ತಿ ರಕ್ಷಣೆಗೆ ಕ್ರಮ: 10,700 ಎಕರೆ ದೇವರ ಸ್ವತ್ತು ಉಳಿಸಿದ ಸರ್ಕಾರ
Mother-in-law tortured daughter-in-law ಸೊಸೆಯ ಗುಪ್ತಾಂಗಕ್ಕೆ ಖಾರದ ಪುಡಿ ಹಾಕಿ ಚಿತ್ರಹಿಂಸೆ ನೀಡಿದ ಅತ್ತೆ-ಮಾವ
9 months pregnant woman ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ