Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Non veg sammelana ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ: ವ್ಯಾಪಕ‌ ಚರ್ಚೆಗೆ ಗ್ರಾಸ
ಕರ್ನಾಟಕಪ್ರಮುಖ

Non veg sammelana ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ: ವ್ಯಾಪಕ‌ ಚರ್ಚೆಗೆ ಗ್ರಾಸ

Share
2 Min Read
SHARE

newsics.com

ಮಂಡ್ಯ: ಮಂಡ್ಯದಲ್ಲಿ ನಡೆದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಇದೀಗ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಸಕ್ಕರೆನಾಡು ಮಂಡ್ಯದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನೀಡಬೇಕು ಎಂದು ಪ್ರಗತಿಪರರು ಧ್ವನಿ ಎತ್ತಿದ್ದರು.

ಆದರೆ ಪ್ರತಿವರ್ಷದಂತೆ ಈ ಬಾರಿ ಕೂಡ ಸಸ್ಯಾಹಾರ ನೀಡಲಾಗುತ್ತಿತ್ತು. ಆದರೆ ಕೊನೆಯ ದಿನವಾದ ಭಾನುವಾರ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆ ಮಾಡಲಾಗಿದ್ದು, ಈ ಕುರಿತ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಹಂಚಿಕೆಗಾಗಿ ಜಟಾಪಟಿ ಉಂಟಾಗಿದ್ದು, ಪ್ರಗತಿಪರರು ಮೊಟ್ಟೆ, ಚಿಕನ್, ಕಬಾಬ್, ಕೋಳಿ ಸಾಂಬಾರ್, ರಾಗಿ ಮುದ್ದೆ ಹಂಚಿಕೆ ಮಾಡಿದ್ದಾರೆ.

ಈ ಕುರಿತ ವಿಡಿಯೋ ವೈರಲ್ ಆಗುತ್ತಿದ್ದು, ಈ ಮಧ್ಯೆ ಪೊಲೀಸರು ಮತ್ತು ಪ್ರಗತಿಪರರ ನಡುವೆ ವಾಗ್ವಾದ ಉಂಟಾಗಿದೆ. ಮಾಂಸಾಹಾರ ವಿತರಣೆ ವೇಳೆ ನೂಕು ನುಗ್ಗಲು ಉಂಟಾಗಿ ಗಲಾಟೆ ನಡೆದಿದೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸ್ ಸಿಬ್ಬಂದಿ ಕೊನೆಗೂ ಮಾಂಸಾಹಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ ಪ್ರಗತಿಪರರು ಮಾಂಸಾಹಾರ ವಿತರಣೆಗೆ ಪಟ್ಟು ಹಿಡಿದ್ದರು. ಈ ವಾದ-ವಿವಾದಗಳ ನಡುವೆಯೇ ಪ್ರಗತಿಪರರು ಸಮ್ಮೇಳದ ಊಟದ ಕೌಂಟರ್‌ನಲ್ಲೇ ಮಾಂಸಾಹಾರ ವಿತರಣೆ ಮಾಡಿದ್ದಾರೆ. ಈ ವೇಳೆ ಮಾಂಸಾಹಾರಕ್ಕಾಗಿ ಸಮ್ಮೇಳನಕ್ಕೆ ಆಗಮಿಸಿದ್ದ ಜನರು ಮುಗಿಬಿದ್ದಿದ್ದರಿಂದ ನೂಕುನುಗ್ಗಲು ಉಂಟಾಯಿತು. ಈ ವೇಳೆ ಸಾರ್ವಜನಿಕರಿಂದ ಪೊಲೀಸರು ಮಾಂಸದೂಟವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಾಡೂಟ ಹಂಚಿದ ವಿಚಾರಕ್ಕೆ ಸಾಹಿತ್ಯಾಸಕ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇದು ಬಾಡೂಟಕ್ಕಾಗಿ ಹೋರಾಟ ಮಾಡುವ ಸ್ಥಳವಲ್ಲ‌. ಇಲ್ಲಿ ಸಾಹಿತ್ಯ, ಭಾಷೆ ಬಗ್ಗೆ ಚರ್ಚೆ ಮಾಡಬೇಕು. ಮಂಡ್ಯ ಬಾಡೂಟ ಫೇಮಸ್ ಅಂತ ಈ ಸ್ಥಳದಲ್ಲಿ ಬಾಡೂಟ ಹಂಚಿದ್ದು ಸರಿಯಲ್ಲ‌. ಸಸ್ಯಹಾರ ಊಟ ಮಾಡಲು ಸಾಕಷ್ಟು ಜನರು ಬರುತ್ತಿದ್ದಾರೆ. ಮಾಂಸದೂಟ ಮಾಡಿಸಿದ್ದರೆ ಅದನ್ನ ನಿರ್ವಹಣೆ ಮಾಡುವುದು ಕಷ್ಟವಾಗುತಿತ್ತು ಎಂದಿದ್ದಾರೆ.

ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರ ಮುದ್ದೆ, ಸೊಪ್ಪಿನ ಸಾಂಬಾರ್, ಅನ್ನ-ರಸಂ, ಮಜ್ಜಿಗೆ, ಸಂಡಿಗೆ ಹಾಗೂ ಬಾದುಷಾವನ್ನು ಬಾಣಸಿಗರು‌ ಸಿದ್ದಪಡಿಸಿದ್ದರು. ಸಮ್ಮೇಳನದಲ್ಲಿ ಭಾಗಿಯಾಗುವ ಪ್ರತಿಯೊಬ್ಬರಿಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಭಾನುವಾರವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಆಗಮಿಸಿದ್ದರು.

Mandya sammelana ಮೂರು ದಿನಗಳ ಸಾಹಿತ್ಯ ಸಮ್ಮೇಳನಕ್ಕೆ ತೆರೆ: ಕನ್ನಡ ಭಾಷಾಭಿವೃದ್ಧಿ ಸೇರಿ 6 ನಿರ್ಣಯ ಮಂಡನೆ

TAGGED:Distribution of meat at a literary conference: a topic for wide debate
Share This Article
Facebook Twitter Copy Link Print
Previous Article FIR against ambulance ಶಾಸಕ ಸಿ.ಟಿ. ರವಿಗೆ ಸೈರನ್ ಹಾಕಿ ಸ್ವಾಗತ ಕೋರಿದ 7 ಆಂಬುಲೆನ್ಸ್ ವಿರುದ್ಧ ಎಫ್ಐಆರ್
Next Article Jyotishya ನಾಳೆ ಸೌಭಾಗ್ಯ- ಶೋಭನ ಯೋಗ: ಈ ಐದು ರಾಶಿಯವರಿಗೆ ಭಾರೀ ಅದೃಷ್ಟ

Popular Posts

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

You Might Also Like

ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?