newsics.com
ಬೆಂಗಳೂರು: ರಾಜ್ಯ, ಹೊರರಾಜ್ಯಗಳ ಸ್ಪಾಗಳಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಮಹದೇವಪುರದ ಅನಿಲ್ ಕುಮಾರ್ ಅಲಿಯಾಸ್ ಅನಿಲ್ ರೆಡ್ಡಿ (40) ಬಂಧಿತ ಆರೋಪಿ. ಈತ ಹೊರರಾಜ್ಯ ಹಾಗೂ ವಿದೇಶಿ ಮಹಿಳೆಯರಿಗೆ ಸ್ಪಾಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ಹೆಚ್ಚಿನ ಸಂಬಳದ ಆಮಿಷವೊಡ್ಡಿ ಅಕ್ರಮ ಬಂಧನದಲ್ಲಿ ಇರಿಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ.
ಆರೋಪಿ ಅನಿಲ್ ಕುಮಾರ್ ವಿರುದ್ಧ ಆಂಧ್ರಪ್ರದೇಶ ಹಾಗೂ ಮಹದೇವಪುರ ಪೊಲೀಸ್ ಠಾಣೆಗಳಲ್ಲಿ ಮಾನವ ಕಳ್ಳ ಸಾಗಣೆ, ಅತ್ಯಾಚಾರ ಸೇರಿ 4 ಅಪರಾಧ ಪ್ರಕರಣಗಳು ದಾಖಲಾಗಿವೆ. ಆದರೂ ಈತ ವೃತ್ತಿಪರ ವೇಶ್ಯಾಗೃಹಗಳನ್ನು ನಡೆಸುವುದನ್ನು ಮುಂದುವರಿಸಿದ್ದ. ಹೀಗಾಗಿ ಮಹದೇವಪುರ ಠಾಣೆ ಪೊಲೀಸರು ಹಾಗೂ ಸಿಸಿಬಿ ಅಧಿಕಾರಿಗಳು ಆರೋಪಿ ಅನಿಲ್ ಕುಮಾರ್‌ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಸಲ್ಲಿಸಿದ್ದ ಪ್ರಸ್ತಾವನೆಗೆ ನಗರ ಪೊಲೀಸ್ ಆಯುಕ್ತರು ಸಮ್ಮತಿ ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಿ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೇರೊಬ್ಬಳನ್ನು ಮದುವೆಯಾಗಲು ಮುಂದಾಗಿದ್ದ ಪ್ರಿಯಕರನ ಖಾಸಗಿ ಅಂಗ ಕತ್ತರಿಸಿ ಆತ್ಮ*ಹತ್ಯೆಗೆ ಯತ್ನಿಸಿದ ಯುವತಿ!
Non veg sammelana ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ: ವ್ಯಾಪಕ ಚರ್ಚೆಗೆ ಗ್ರಾಸ
Health Care: ಲೋ ಬಿಪಿ ಲಕ್ಷಣಗಳು ಇವೇ ನೋಡಿ; ಎಂದಿಗೂ ನೆಗ್ಲೆಕ್ಟ್ ಮಾಡ್ಬೇಡಿ