newsics.com
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಯೋಧರನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನ ಕಮರಿಗೆ ಉರುಳಿದ ಪರಿಣಾಮ ಐವರು ಸೈನಿಕರು ಹುತಾತ್ಮರಾಗಿದ್ದಾರೆ. ಹಲವು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದುವಸೇನಾ ಮೂಲಗಳು ತಿಳಿಸಿವೆ.
ಸೇನಾಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸುವ ಕೆಲಸ ನಡೆಯುತ್ತಿದೆ.
ಕಳೆದ ತಿಂಗಳು, ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಇದೇ ರೀತಿಯ ಅಪಘಾತದಲ್ಲಿ, ಸೇನಾ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದರು ಮತ್ತು ಇನ್ನೊಬ್ಬರು ಗಾಯಗೊಂಡಿದ್ದರು. ನವೆಂಬರ್ 4 ರಂದು ಕಲಕೋಟ್‌ನ ಬಡೋಗ್ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಇದರಲ್ಲಿ ನಾಯಕ್ ಬದ್ರಿ ಲಾಲ್ ಮತ್ತು ಕಾನ್‌ಸ್ಟೆಬಲ್ ಜೈಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದರು.