newsics.com
ಪೂಂಚ್: ಇಂದು ಸಂಜೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಆಳವಾದ ಕಂದಕಕ್ಕೆ ಉರುಳಿದೆ.
ಐವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ 18 ಯೋಧರು ವಾಹನದಲ್ಲಿದ್ದರು ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.
ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಇಂದು ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ.
ನಿಲಂ ಪ್ರಧಾನ ಕಛೇರಿಯಿಂದ ಎಲ್‌ಒಸಿ ಮೂಲಕ ಬನೋಯ್ ಘರೋವಾ ಪೋಸ್ಟ್‌ಗೆ ತೆರಳುತ್ತಿದ್ದ 11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು ಅಪಘಾತಕ್ಕೀಡಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆ ವಾಹನವು ಸುಮಾರು 150 ಅಡಿ ಆಳದ ಕಮರಿಗೆ ಬಿದ್ದಿದ್ದು, ಚಾಲಕ ಸೇರಿದಂತೆ 12 ಸೈನಿಕರಿಗೆ ಗಂಭೀರ ಗಾಯಗಳಾಗಿವೆ.