newsics.com
ನವದೆಹಲಿ: ಕೇಂದ್ರ ಗೃಹ ಸಚಿವಾಲಯದ ಮಾಜಿ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ಮಂಗಳವಾರ ಮಣಿಪುರದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
ಮಣಿಪುರ ಸೇರಿದಂತೆ ರಾಷ್ಟ್ರಪತಿಗಳು ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸಿದ್ದಾರೆ. ಒಡಿಶಾ, ಮಿಜೋರಾಂ, ಕೇರಳ, ಬಿಹಾರ ರಾಜ್ಯಗಳಿಗೂ ನೂತನ ರಾಜ್ಯಪಾಲರು ನೇಮಕವಾಗಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಸಚಿವ ವಿಕೆ ಸಿಂಗ್ ಅವರನ್ನು ಹೊಸ ಮಿಜೋರಾಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.