newsics.com
ಬೆಂಗಳೂರು: ಜನರ ಹಲವು ದಿನಗಳ ನಿರೀಕ್ಷೆ, ಅಪೇಕ್ಷೆ ಕೊನೆಗೂ ಈಡೇರಿದೆ. ಕೆಎಂಎಫ್ ನಂದಿನಿ ಕಾಮ್ ಕಾಮ್ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ನಂದಿನಿ ವೇ ಪ್ರೊಟೀನ್ ರೆಡಿಮೇಡ್ ದೋಸೆ ಹಾಗೂ ಇಡ್ಲಿ ಹಿಟ್ಟು ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ. ಕರ್ನಾಟಕ ಹಾಲು ಒಕ್ಕೂಟವು(KMF) ನಂದಿನಿ ಬ್ರ್ಯಾಂಡ್ ಅಡಿಯಲ್ಲಿ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದೆ.
ಹಾಲು, ಮೊಸರಿನಂತೆ ಇನ್ಮುಂದೆ ಗಾಹಕರಿಗೆ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ. ಕರ್ನಾಟಕ ರಾಜ್ಯದ ಜನತೆಗೆ ಈವರೆಗೆ ಮನೆ ಬಾಗಿಲಿಗೆ ನಂದಿನಿ ಬ್ರ್ಯಾಂಡ್‌ನ ಹಾಲು ಮೊಸರು ಬರುತ್ತಿದ್ದ ಮಾದರಿಯಲ್ಲಿಯೇ ಇನ್ನು ಮುಂದೆ ಇಡ್ಲಿ, ದೋಸೆ ಹಿಟ್ಟು ಕೂಡ ಬರಲಿದೆ. ಹೀಗಾಗಿ, ರಾಜ್ಯದ ಎಲ್ಲ ನಗರ, ಪಟ್ಟಣಗಳ ಜನರು ಬೆಳಗ್ಗಿನ ತಿಂಡಿ ಬಗ್ಗೆ ಚಿಂತೆ ಮಾಡುವ ಅಗತ್ಯವೇ ಇಲ್ಲ.
ಪ್ರಾಯೋಗಿಕವಾಗಿ ಬೆಂಗಳೂರು ನಗರದಲ್ಲಿ ಈ ದೋಸೆ, ಇಡ್ಲಿ ಹಿಟ್ಟು ಮಾರುಕಟ್ಟೆಗೆ ಪರಿಚಯಿಸಲಾಗುತ್ತಿದ್ದು, ಗ್ರಾಹಕರಿಗೆ ಕೈಗೆಟುವ ದರದಲ್ಲಿ ನೀಡಲಾಗುತ್ತಿದೆ. ದೋಸೆ ಮತ್ತು ಇಡ್ಲಿ ಹಿಟ್ಟಿನ 450 ಗ್ರಾಂ ಪ್ಯಾಕ್ಗೆ 40 ರೂ. ಹಾಗೂ 900 ಗ್ರಾಂ ಪ್ಯಾಕೇಟ್ಗೆ 80 ರೂಪಾಯಿ ದರ ನಿಗದಿ ಮಾಡಲಾಗಿದೆ.
ಆರಂಭದಲ್ಲಿ ಮಾರುಕಟ್ಟೆಗಳು ಹಾಗೂ ನಂದಿನಿ ಹಾಲಿನ ಕೇಂದ್ರಗಳಲ್ಲಿ ಇದೀಗ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಮನೆ, ಮನೆಗೆ ಹಾಲನ್ನು ತಲುಪಿಸುವ ಮಾದರಿಯಲ್ಲಿಯೇ ಇಡ್ಲಿ ಅಥವಾ ದೋಸೆ ಹಿಟ್ಟುಗಳನ್ನು ಕೂಡ ಸರಬರಾಜು ಮಾಡುವುದಕ್ಕೆ ಚಿಂತನೆ ಮಾಡಲಾಗಿದೆ.
BJP MLA Munirathna ಮುನಿರತ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ SIT ಮನವಿ
Siddapura ಪಿಗ್ಮಿ ಹಣಕ್ಕಾಗಿ ಕತ್ತು ಹಿಸುಕಿ ಮನೆಯಲ್ಲೇ ವೃದ್ಧೆ ಹತ್ಯೆ