newsics.com
ಚಿತ್ರದುರ್ಗ: ಖಾಸಗಿ ಶಾಲೆ ಆವರಣದಲ್ಲಿ ನವಜಾತ ಶಿಶುವಿನ ಮೃತದೇಹ ಹೂಳಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿ ನಡೆದಿದೆ.
ವೆಂಕಟೇಶ್ವರ ಶಾಲೆಯ ಬಳಿ ಅರೆಬರೆ ಹೂತಿದ್ದ ಶಿಶುವಿನ ಶವ ಪತ್ತೆಯಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ಅರ್ಧದೇಹವಿರುವ ಶಿಶುವಿನ ಮೃತದೇಹ ಪತ್ತೆಯಾಗಿದ್ದು, ನಾಯಿಗಳು ಕಚ್ಚಿ ಎಳೆದಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.