newsics.com
ಬೆಳಗಾವಿ: ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಬೆಳಗಾವಿ ಜಿಲ್ಲೆಯಲ್ಲಿಯೇ ಬಾಣಂತಿಯೊಬ್ಬಳು ಮೃತಪಟ್ಟ ಬಗ್ಗೆ ವರದಿಯಾಗಿತ್ತು. ಇದೀಗ ಮತ್ತೋರ್ವ ಬಾಣಂತಿ ಮಹಿಳೆ ಮೃತಪಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.
ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ 25 ವರ್ಷದ ಪೂಜಾ ಕಡಕಬಾವಿ ಎನ್ನುವ ಬಾಣಂತಿ ಸಾವಿಗೀಡಾಗಿದ್ದಾರೆ.
ಬೆಳಗಾವಿಯಲ್ಲಿ ಇದೀಗ ಮತ್ತೋರ್ವ ಬಾಣಂತಿ ಸಾವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕುಂದರಗಿ ಗ್ರಾಮದ ಪೂಜಾ ಕಡಕಬಾವಿ ಕಳೆದ ಎರಡು ದಿನಗಳ ಹಿಂದೆ ಹೆರಿಗೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೆ ನಿನ್ನೆ (ಡಿ.26) ಗಂಡು ಮಗುವಿನ ಜನ್ಮ ನೀಡಿದ್ದ ಪೂಜಾ ಕಡಕಬಾವಿ. ಆ ಬಳಿಕ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿತ್ತು, ಉಸಿರಾಟದ ಸಮಸ್ಯೆಯಿಂದ ಪೂಜಾ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಇನ್ನು ಒಂದು ವಾರದಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ಇದು ಎರಡನೆಯ ಬಾಣಂತಿಯ ಸಾವಾಗಿದೆ. ಎರಡು ವಾರದಲ್ಲಿ ಇದು ಮೂರನೇ ಬಾಣಂತಿ ಸಾವು ಇದಾಗಿದೆ.
ಮನಮೋಹನ್ ಸಿಂಗ್ ನಿಧನ ಹಿನ್ನೆಲೆ: ರಾಜ್ಯದಲ್ಲಿ ಶುಕ್ರವಾರ ಸರ್ಕಾರಿ ರಜೆ ಘೋಷಣೆ